
ಜೈಪುರ: ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಪ್ರಾಗ್‌ಪುರ ಪ್ರದೇಶದ ಜವಾಹರ್ ನವೋದಯ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ದಲಿತ ವಿದ್ಯಾರ್ಥಿಯ ಶವ ಆತನ ತರಗತಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಈ ಘಟನೆ ಬುಧವಾರ ನಡೆದಿದ್ದು, ಬಾಲಕನ ಕುಟುಂಬ, ಮೃತ ದೇಹ ಸ್ವೀಕರಿಸಲು ನಿರಾಕರಿಸಿದೆ.
ದಲಿತ ವಿದ್ಯಾರ್ಥಿಯನ್ನು ಕೊಂದು ನಂತರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳುತ್ತಿರುವ ಇಬ್ಬರು ಶಿಕ್ಷಕರನ್ನು ಬಂಧಿಸುವಂತೆ ಒತ್ತಾಯಿಸಿ ಬಾಲಕನ ಕುಟುಂಬ ಧರಣಿ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಇಬ್ಬರು ಶಿಕ್ಷಕರು ಬಾಲಕನಿಗೆ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ ಎಂದು ಕೊಟ್‌ಪುಟಾಲಿ-ಬೆಹ್ರೋರ್ ಪೊಲೀಸ್ ವರಿಷ್ಠಾಧಿಕಾರಿ ರಂಜಿತಾ ಶರ್ಮಾ ತಿಳಿಸಿದ್ದಾರೆ.
ಕುಟುಂಬಸ್ಥರು ಧರಣಿ ನಡೆಸುತ್ತಿರುವುದರಿಂದ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿಲ್ಲ. ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಆರೋಪಿ ಇಬ್ಬರು ಶಿಕ್ಷಕರ ವಿರುದ್ಧ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 302 ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಇದುವರೆಗೆ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Advertisement