ಚೀನಾ ನಮ್ಮ ಭೂಮಿ ಕಸಿದುಕೊಂಡಿದೆ ಎಂದು ಲಡಾಖ್‌ನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತು: ರಾಹುಲ್ ಗಾಂಧಿ

ಗಡಿ ವಿವಾದವನ್ನು ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಡಾಖ್‌ನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಚೀನಾ "ನಮ್ಮ ಭೂಮಿಯನ್ನು ಕಸಿದುಕೊಂಡಿದೆ" ಎಂದು ಗೊತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಒಂದು...
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಕಾರ್ಗಿಲ್: ಗಡಿ ವಿವಾದವನ್ನು ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಡಾಖ್‌ನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಚೀನಾ "ನಮ್ಮ ಭೂಮಿಯನ್ನು ಕಸಿದುಕೊಂಡಿದೆ" ಎಂದು ಗೊತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಂಡಿದ್ದ ಎಂದು ಸುಳ್ಳು ಹೇಳುತ್ತಿರುವುದಾಗಿ ಶುಕ್ರವಾರ ಹೇಳಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ) ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬುಧವಾರ ಸಂವಾದ ನಡೆಸಿದ ನಂತರ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಈ ಹೇಳಿಕೆ ನೀಡಿದ್ದಾರೆ.

ಒಂಬತ್ತು ದಿನಗಳ ಲಡಾಖ್ ಪ್ರವಾಸದಲ್ಲಿರುವ ರಾಹುಲ್  ಗಾಂಧಿ ಅವರು ಕೊನೆಯ ದಿನವಾದ ಇಂದು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು.

"ಕಳೆದ ವಾರ ನಾನು ಮೋಟಾರ್‌ಸೈಕಲ್‌ನಲ್ಲಿ ಇಡೀ ಲಡಾಖ್‌ಗೆ ಭೇಟಿ ನೀಡಿದ್ದೇನೆ. ಲಡಾಖ್ ಒಂದು ಆಯಕಟ್ಟಿನ ಸ್ಥಳವಾಗಿದೆ ಮತ್ತು ನಾನು ಪ್ಯಾಂಗಾಂಗ್ ಸರೋವರದಲ್ಲಿದ್ದಾಗ, ಚೀನಾ ಸಾವಿರಾರು ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟವಾಗಿ ತಿಳಿಯಿತು ಎಂದರು.

ನಮ್ಮ ಒಂದು ಇಂಚು ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಪ್ರಧಾನಿ ಮೋದಿ ಹೇಳಿರುವುದು ಬೇಸರದ ಸಂಗತಿ. ಅವರ ಹೇಳಿಕೆ ಸಂಪೂರ್ಣ ಸುಳ್ಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

"ಚೀನಾ ನಮ್ಮ ಭೂಮಿಯನ್ನು ಕಿತ್ತುಕೊಂಡಿದೆ ಎಂದು ಲಡಾಖ್‌ನ ಪ್ರತಿಯೊಬ್ಬ ವ್ಯಕ್ತಿಗೂ ಗೊತ್ತಿದೆ. ಆದರೆ ಪ್ರಧಾನಿ ಮೋದಿ ಸತ್ಯವನ್ನು ಮಾತನಾಡುತ್ತಿಲ್ಲ" ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು ಲಡಾಖ್ ಪ್ರವಾಸದ ಸಮಯದಲ್ಲೇ ಎರಡನೇ ಬಾರಿ ಚೀನಾದೊಂದಿಗಿನ ಗಡಿ ವಿವಾದವನ್ನು ಪ್ರಸ್ತಾಪಿಸಿದ್ದಾರೆ. ಲಡಾಖ್‌ನ ಒಂದು ಇಂಚು ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಮೋದಿ ಹೇಳಿಕೆ ಸುಳ್ಳು ಎಂದು ಕಳೆದ ಭಾನುವಾರ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com