ತಮಿಳುನಾಡು ರೈಲು ಬೆಂಕಿ ದುರಂತ: ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಎಂಕೆ ಸ್ಟಾಲಿನ್!

ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಎಂಕೆ ಸ್ಚಾಲಿನ್ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ತಮಿಳುನಾಡು ರೈಲು ಬೆಂಕಿ ದುರಂತ
ತಮಿಳುನಾಡು ರೈಲು ಬೆಂಕಿ ದುರಂತ

ಚೆನ್ನೈ: ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಎಂಕೆ ಸ್ಚಾಲಿನ್ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರೆ, 20 ಗಾಯಗೊಂಡಿದ್ದರು. ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಮುಂಜಾನೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. 55 ಪ್ರಯಾಣಿಕರು ಇದ್ದ ಆ ಬೋಗಿಯನ್ನು ನಾಗರಕೋಯಿಲ್‌ ಬಳಿ ರೈಲಿಗೆ ಅಳವಡಿಸಲಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಬೋಗಿಯಲ್ಲಿ ಅಕ್ರಮವಾಗಿ ಅಡುಗೆ ಸಿಲಿಂಡರ್ ಗಳನ್ನು ಸಾಗಿಸಲಾಗುತ್ತಿತ್ತು. ಟೀ ಕಾಯಿಸುವಾಗ ಅವಘಡ ಸಂಭವಿಸಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅಘಾತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ದುರಂತದ ಸಂತ್ರಸ್ಥರ ಕುಟುಂಬಕ್ಕೆ ತಲಾ 3ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಎಂಕೆ ಸ್ಟಾಲಿನ್, 'ಮಧುರೈ ರೈಲ್ವೆ ಜಂಕ್ಷನ್ ಬಳಿ ರೈಲು ಬೆಂಕಿ ಅವಘಡದಲ್ಲಿ ಒಂಬತ್ತು ಅಮೂಲ್ಯ ಜೀವಗಳು ಬಲಿಯಾದ ದಾರುಣ ಘಟನೆಯಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಸಂತ್ರಸ್ತ ಕುಟುಂಬಗಳನ್ನು ಬೆಂಬಲಿಸಲು, 3 ಲಕ್ಷ ರೂಗಳ ಪರಿಹಾರವನ್ನು ನೀಡಲಾಗುತ್ತದೆ.

ಈ ಕುರಿತು ಮಾನ್ಯ ಸಚಿವರಿಗೆ ಸೂಚನೆ ನೀಡಿದ್ದೇನೆ. ಮತ್ತು ಗಾಯಾಳುಗಳಿಗೆ ಅತ್ಯುನ್ನತ ಗುಣಮಟ್ಟದ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳು. ಮೃತರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಸಾಗಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com