'ಶೋಭಾ ಯಾತ್ರೆ'ಗೆ ಕರೆ ನೀಡಿದ ನಂತರ ನುಹ್‌ನಲ್ಲಿ ಸೆಕ್ಷನ್ 144 ಜಾರಿ, ಹೊರಗಿನವರಿಗೆ ಪ್ರವೇಶ ನಿಷೇಧ

ಹರಿಯಾಣದ ನುಹ್ ನಲ್ಲಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್‌ ಸೋಮವಾರ ಶೋಭಾ ಯಾತ್ರೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಮತ್ತು ಹೊರಗಿನವರಿಗೆ ಪ್ರವೇಶ ನಿಷೇಧಿಸಲಾಗಿದೆ.
ನುಹ್ ಜಿಲ್ಲೆಯಲ್ಲಿ ಹಿಂಸಾಚಾರ
ನುಹ್ ಜಿಲ್ಲೆಯಲ್ಲಿ ಹಿಂಸಾಚಾರ
Updated on

ನುಹ್‌: ಹರಿಯಾಣದ ನುಹ್ ನಲ್ಲಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್‌ ಸೋಮವಾರ ಶೋಭಾ ಯಾತ್ರೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಮತ್ತು ಹೊರಗಿನವರಿಗೆ ಪ್ರವೇಶ ನಿಷೇಧಿಸಲಾಗಿದೆ.

'ಶೋಭಾ ಯಾತ್ರೆ'ಗೆ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರೂ ಮೆರವಣಿಗೆ ನಡೆಸುವುದಾಗಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್‌ ಘೋಷಿಸಿದ ಹಿನ್ನೆಲೆಯಲ್ಲಿ ನುಹ್ ಜಿಲ್ಲೆ ಹಾಗೂ ಇತರ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಟ್ಟುನಿಟ್ಟಿನ ನಿಗಾ ಇರಿಸಲು ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಗಡಿಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ, ನುಹ್ ಜಿಲ್ಲಾಡಳಿತವು ಈಗಾಗಲೇ ಸೋಮವಾರ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್‌ಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ. ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಿದೆ ಹಾಗೂ ಕೋಮು ಸೂಕ್ಷ್ಮ ಜಿಲ್ಲೆಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ನುಹ್ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿದ್ದು, ಹಿಂಸಾಚರದಲ್ಲಿ ಇಬ್ಬರು ಗೃಹರಕ್ಷಕರು ಮತ್ತು ಧರ್ಮಗುರು ಸೇರಿದಂತೆ ಆರು ಜನ ಮೃತಪಟ್ಟಿದ್ದಾರೆ.

ಗಲಭೆ ಪೀಡಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದೆ. ಹಾಗಾಗಿ ಮೆರವಣಿಗೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಕೇವಲ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಲಿ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com