ಬಿಜೆಪಿ ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ ಬುಕ್: ಮಮತಾ ಬ್ಯಾನರ್ಜಿ

ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ  ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ
ಸಿಎಂ ಮಮತಾ ಬ್ಯಾನರ್ಜಿ
Updated on

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಟಿಎಂಸಿ ಯುವ ಘಟಕದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ರಾಷ್ಟ್ರವು ನಿರಂಕುಶ ಆಡಳಿತವನ್ನು ಎದುರಿಸುವುದನ್ನು ಖಚಿತಪಡಿಸುತ್ತದೆ ಎಂದು ಎಚ್ಚರಿಸಿದರು. 

"ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಯನ್ನು ಬಿಜೆಪಿ ನಡೆಸಬಹುದು, ಕೇಸರಿ ಪಕ್ಷವು ಈಗಾಗಲೇ ಸಮುದಾಯಗಳ ನಡುವಿನ ದ್ವೇಷದ ಘರ್ಷಣೆ ರಾಷ್ಟ್ರವಾಗಿ ಮಾಡಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತಾರೆ ಎಂದು ಮಮತಾ ಆರೋಪಿಸಿದರು. 

ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ, ಆದ್ದರಿಂದ ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸುವಂತಿಲ್ಲ ಎಂದ ಅವರು, ಬಂಗಾಳದಲ್ಲಿ ಮೂರು ದಶಕಗಳ ಸಿಪಿಐ-ಎಂ ಆಡಳಿತವನ್ನು ಸೋಲಿಸಿದ್ದೇನೆ ಮತ್ತು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com