ನೀರಜ್ ಚೋಪ್ರಾರಂತೆ ಇರಿ; ಹೃದಯಗಳನ್ನು ಗೆಲ್ಲಿರಿ, ಚಲನ್‌ಗಳನ್ನಲ್ಲ: ರಸ್ತೆ ಸುರಕ್ಷತೆ ಕುರಿತು ದೆಹಲಿ ಪೊಲೀಸರ ಟ್ವೀಟ್

ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಕುರಿತು ಚಾಲಕರಿಗೆ ಜಾಗೃತಿ ಮೂಡಿಸಲು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ಗೆಲುವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಸೃಜನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ನವದೆಹಲಿ: ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಕುರಿತು ಚಾಲಕರಿಗೆ ಜಾಗೃತಿ ಮೂಡಿಸಲು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ಗೆಲುವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಸೃಜನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಚಾಲಕರೇ.. ನೀವು ನೀರಜ್ ಚೋಪ್ರಾ ಅವರಂತೆ ಇರಿ. ಹೃದಯಗಳನ್ನು ಗೆಲ್ಲಿರಿ, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಚಲನ್‌ಗಳಲ್ಲ' ಎಂದು ಬರೆದಿದ್ದಾರೆ.

ಮುಂದುವರಿದು, 'ಚಾಲಕರು ಮತ್ತು ಸವಾರರಿಗೆ, ನೀವು ನೀರಜ್ ಅವರ ಜಾವೆಲಿನ್ ಅಲ್ಲ ಮತ್ತು ಬಿಳಿ ರೇಖೆಯನ್ನು ದಾಟುವುದರಿಂದ ನಿಮಗೆ ಯಾವುದೇ ಅಂಕಗಳು ಅಥವಾ ಪದಕಗಳು ಸಿಗುವುದಿಲ್ಲ' ಎಂದು ಅದು ಹೇಳಿದೆ.

ದೆಹಲಿ ಪೊಲೀಸರ ಈ ಟ್ವೀಟ್‌ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಬಳಕೆದಾರರಲ್ಲಿ ಒಬ್ಬರು, ಲೇನ್ ಡ್ರೈವಿಂಗ್ ಅನ್ನು ಆದ್ಯತೆಯ ಮೇಲೆ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ಆಗಸ್ಟ್ 27 ರಂದು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ 88.17 ಮೀಟರ್ ಎಸೆತದೊಂದಿಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಚೋಪ್ರಾ ಈಗ ಶೂಟರ್ ಅಭಿನವ್ ಬಿಂದ್ರಾ ನಂತರ ಒಲಿಂಪಿಕ್ಸ್ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಏಕಕಾಲದಲ್ಲಿ ಗೆದ್ದ ಎರಡನೇ ಭಾರತೀಯರಾಗಿದ್ದಾರೆ.

ಬಿಂದ್ರಾ ಅವರು 23ನೇ ವಯಸ್ಸಿನಲ್ಲಿ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದಿದ್ದರು ಮತ್ತು 25ನೇ ವಯಸ್ಸಿನಲ್ಲಿ ಒಲಿಂಪಿಕ್ಸ್ ಚಿನ್ನವನ್ನು ಗೆದ್ದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com