ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಸೇರಿಸಿ ಹೊಸ ನಕ್ಷೆ ಬಿಡುಗಡೆ; ಚೀನಾ ನಡೆ ಖಂಡಿಸಿದ ಭಾರತ

ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಚೀನಾ, ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್‌ ಚಿನ್‌ ಪ್ರದೇಶ ತನ್ನ ಭೂಭಾಗ ಎಂದು ತೋರಿಸುವ ಹೊಸ ನಕ್ಷೆ ಬಿಡುಗಡೆ ಮಾಡಿದ್ದು, ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್
ವಿದೇಶಾಂಗ ಸಚಿವ ಎಸ್ ಜೈಶಂಕರ್

ನವದೆಹಲಿ: ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಚೀನಾ, ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್‌ ಚಿನ್‌ ಪ್ರದೇಶ ತನ್ನ ಭೂಭಾಗ ಎಂದು ತೋರಿಸುವ ಹೊಸ ನಕ್ಷೆ ಬಿಡುಗಡೆ ಮಾಡಿದ್ದು, ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.

"ಭಾರತದ ಭೂಪ್ರದೇಶದ ಮೇಲೆ ಹಕ್ಕು ಸಾಧಿಸುವ ಚೀನಾದ 2023 ಸ್ಟ್ಯಾಂಡರ್ಡ್ ಮ್ಯಾಪ್ ಗೆ ವಿರೋಧ ವ್ಯಕ್ತಪಡಿಸಿರುವ ಭಾರತ, ಇಂದು ರಾಜತಾಂತ್ರಿಕ ಮಾರ್ಗಗಳ ಮೂಲಕ ನಾವು ಬಲವಾದ ಪ್ರತಿಭಟನೆಯನ್ನು ದಾಖಲಿಸಿದ್ದೇವೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ(MEA) ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿದ್ದಾರೆ.

ಚೀನಾ ಇಂತಹ ಪ್ರಯತ್ನ ಮಾಡುತ್ತಿರುವುದು ಇದೇ ಮೊದಲಲ್ಲ. ನಾವು ಇದನ್ನು ಖಡಾಖಂಡಿತವಾಗಿ ತಿರಸ್ಕರಿಸುತ್ತೇವೆ ಎಂದು ಅರಿಂದಮ್ ಬಾಗ್ಚಿ ಅವರು ಟ್ವೀಟ್ ಮಾಡಿದ್ದಾರೆ.

ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಪ್ರಯತ್ನಗಳು ನಿಜ ಪರಿಸ್ಥಿತಿಯನ್ನು ಬದಲಾಯಿಸುವುದಿಲ್ಲ. ಚೀನೀ ಕಡೆಯ ಇಂತಹ ಕ್ರಮಗಳು ಗಡಿ ಸಮಸ್ಯೆಯನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತವೆ ಎಂದು ಬಾಗ್ಚಿ ಹೇಳಿದ್ದಾರೆ.

ಅಕ್ಸಾಯ್ ಚಿನ್, ಅರುಣಾಚಲ ಪ್ರದೇಶ, ತೈವಾನ್ ಮತ್ತು ದಕ್ಷಿಣ ಚೀನಾ ಸಮುದ್ರದ ವಿವಾದಿತ ಪ್ರದೇಶಗಳನ್ನು ಒಳಗೊಂಡ ನವೀಕರಿಸಿದ ಪ್ರಮಾಣಿತ ನಕ್ಷೆಯನ್ನು ಚೀನಾ ಸೋಮವಾರ ಬಿಡುಗಡೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com