'ಸ್ಮೈಲ್ ಪ್ಲೀಸ್': ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರ ಕ್ಲಿಕ್ಕಿಸಿದ ಪ್ರಗ್ಯಾನ್ ರೋವರ್!

ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಇದೇ ಮೊದಲ ಬಾರಿಗೆ ಪ್ರಗ್ಯಾನ್ ರೋವನ್ ತನ್ನ ಸಹೋದ್ಯೋಗಿ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರವನ್ನು ಕ್ಲಿಕ್ಕಿಸಿ ಭೂಮಿಗೆ ರವಾನಿಸಿದೆ.
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರ ಕ್ಲಿಕ್ಕಿಸಿದ ಪ್ರಗ್ಯಾನ್ ರೋವರ್
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರ ಕ್ಲಿಕ್ಕಿಸಿದ ಪ್ರಗ್ಯಾನ್ ರೋವರ್

ಬೆಂಗಳೂರು: ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಇದೇ ಮೊದಲ ಬಾರಿಗೆ ಪ್ರಗ್ಯಾನ್ ರೋವನ್ ತನ್ನ ಸಹೋದ್ಯೋಗಿ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರವನ್ನು ಕ್ಲಿಕ್ಕಿಸಿ ಭೂಮಿಗೆ ರವಾನಿಸಿದೆ.

ಹೌದು.. ಚಂದ್ರಯಾನ-3 ರೋವರ್ ಪ್ರಗ್ಯಾನ್ ಇಂದು ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಹಂಚಿಕೊಂಡಿದ್ದು, ಅದು ತನ್ನ ನ್ಯಾವಿಗೇಷನ್ ಕ್ಯಾಮೆರಾ ಬಳಸಿ ಕ್ಲಿಕ್ ಮಾಡಿದ ಮೊದಲ ಚಿತ್ರ ಇದಾಗಿದೆ. ಚಂದ್ರನ ಮೇಲೆ ಇಳಿದ ನಂತರ ರೋವರ್ ಕ್ಲಿಕ್ ಮಾಡಿದ ಮೊದಲ ಚಿತ್ರ ಇದಾಗಿದ್ದು, ಇದುವರೆಗೂ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳನ್ನು ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದನ್ನು "ಮಿಷನ್‌ನ ಚಿತ್ರ" ಎಂದು ಕರೆದಿದೆ. ರೋವರ್‌ನಲ್ಲಿರುವ ನವಕ್ಯಾಮ್‌ಗಳನ್ನು ಬೆಂಗಳೂರಿನಲ್ಲಿರುವ ಲ್ಯಾಬೊರೇಟರಿ ಫಾರ್ ಎಲೆಕ್ಟ್ರೋ-ಆಪ್ಟಿಕ್ಸ್ ಸಿಸ್ಟಮ್ಸ್ (LEOS) ಅಭಿವೃದ್ಧಿಪಡಿಸಿದೆ.

ಭಾರತವು ಆಗಸ್ಟ್ 23 ರಂದು ಇಸ್ರೋದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರನ ಮಿಷನ್ ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (LM) ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಿ, ಈ ಸಾಧನೆಯನ್ನು ಸಾಧಿಸಿದ ಜಗತ್ತಿನ ನಾಲ್ಕನೇ ದೇಶವಾಗಿದೆ ಮತ್ತು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಇತಿಹಾಸವನ್ನು ಭಾರತ ಈ ಮೂಲಕ ಬರೆದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com