'ರಾಹುಲ್ ಜತೆ ಜಗಳ': ಅಣ್ಣ, ತಂಗಿ ಜೋಡಿ ಬಿಜೆಪಿಯ ಸುಳ್ಳು, ಲೂಟಿ, ಪೊಳ್ಳು ಪ್ರಚಾರಕ್ಕೆ ಬ್ರೇಕ್ ಹಾಕಲಿದೆ ಎಂದ ಪ್ರಿಯಾಂಕಾ

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ತಮ್ಮ ನಡುವೆ ಜಗಳ ನಡೆಯುತ್ತಿದೆ ಎಂಬ ಬಿಜೆಪಿ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನಾನು ಮತ್ತು ನನ್ನ ಸಹೋದರ ಇಬ್ಬರೂ...
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ತಮ್ಮ ನಡುವೆ ಜಗಳ ನಡೆಯುತ್ತಿದೆ ಎಂಬ ಬಿಜೆಪಿ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನಾನು ಮತ್ತು ನನ್ನ ಸಹೋದರ ಇಬ್ಬರೂ ಒಟ್ಟಾಗಿ ಆಡಳಿತ ಪಕ್ಷದ "ಸುಳ್ಳು, ಲೂಟಿ ಮತ್ತು ಪೊಳ್ಳು ಪ್ರಚಾರ"ಕ್ಕೆ ಅಂತ್ಯ ಹಾಡುತ್ತೇವೆ ಎಂದು ಬುಧವಾರ ತಿರುಗೇಟು ನೀಡಿದ್ದಾರೆ.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡುವೆ "ಜಗಳ" ನಡೆಯುತ್ತಿದೆ ಎಂದು ಹೇಳಿದ ನಂತರ ಪ್ರಿಯಾಂಕಾ ಗಾಂಧಿ ಅವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, "ಬಿಜೆಪಿ ಜನರೇ, ಹಣದುಬ್ಬರ ಮತ್ತು ನಿರುದ್ಯೋಗದ ಈ ಸಮಯದಲ್ಲಿ ಉಳಿದಿರುವ ಏಕೈಕ ಅಸಂಬದ್ಧ ವಿಷಯವೇ? ಕ್ಷಮಿಸಿ, ಆದರೆ ನಿಮ್ಮ ಸಣ್ಣ ಮನಸ್ಸಿನ ಈ ಕನಸು ಎಂದಿಗೂ ನನಸಾಗುವುದಿಲ್ಲ. ನನ್ನ ಸಹೋದರ ಮತ್ತು ನಾನು ಯಾವಾಗಲೂ ಪರಸ್ಪರ ಪ್ರೀತಿ, ವಿಶ್ವಾಸ, ಗೌರವ ಮತ್ತು ನಿಷ್ಠೆಯನ್ನು ಮಾತ್ರ ಹೊಂದಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಚಿಂತಿಸಬೇಡಿ, ನಾವಿಬ್ಬರೂ ಸಹೋದರ-ಸಹೋದರಿ, ದೇಶದ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರೊಂದಿಗೆ ನಿಮ್ಮ ಸುಳ್ಳು, ಲೂಟಿ ಮತ್ತು ಪೊಳ್ಳು ಪ್ರಚಾರದ ದುರಹಂಕಾರಕ್ಕೆ ಬ್ರೇಕ್ ಹಾಕುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

"ರಕ್ಷಾ ಬಂಧನದ ಶುಭಾಶಯಗಳು. ಇದು ಸಹೋದರ ಮತ್ತು ಸಹೋದರಿಯ ನಡುವಿನ ಪ್ರೀತಿಯ ಹಬ್ಬವಾಗಿದೆ, ಇದನ್ನು ಸಕಾರಾತ್ಮಕ ಮನೋಭಾವದಿಂದ ಆಚರಿಸಿ" ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com