ದೆಹಲಿ: ಅಮೆಜಾನ್‌ ಕಂಪನಿಯ ಸೀನಿಯರ್ ಮ್ಯಾನೇಜರ್'ನ್ನು ಗುಂಡಿಕ್ಕಿ ಹತ್ಯೆ

ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯ ಭಜನ್‌ಪುರದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯ ಭಜನ್‌ಪುರದಲ್ಲಿ ನಡೆದಿದೆ.

ಹರ್‌ಪ್ರೀತ್ ಗಿಲ್(36) ಹತ್ಯೆಯಾದ ವ್ಯಕ್ತಿಯಾಗಿದ್ದು, ಈತ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ಭಜನಪುರ ಪ್ರದೇಶದ ಸುಭಾಷ್ ವಿಹಾರ್ ಬಳಿ ಹರ್‌ಪ್ರೀತ್ ಗಿಲ್ ಹಾಗು ಆತನ ಸ್ನೇಹಿತ ಮೋಟಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಹರ್‌ಪ್ರೀತ್ ತಲೆಗೆ ಗುಂಡು ತಗುಲಿದೆ. ಈ ವೇಳೆ ಆತ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಸ್ನೇಹಿತನ ಗೋವಿಂದ್ ಸಿಂಗ್ ಆತನ ಬಲ ಕಿವಿಗೆ ಗುಂಡು ತಗುಲಿ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಗೊಂಡ ಗೋವಿಂದ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಘಟನೆ ನಡೆದ ಸ್ಥಳಗಳ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com