ಸೆಪ್ಟೆಂಬರ್ ನಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕು ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಆಗಸ್ಟ್ ತಿಂಗಳಲ್ಲಿ ಕೈ ಕೊಟ್ಟಿರುವ ನೈರುತ್ಯ ಮುಂಗಾರು ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಚುರುಕುಗೊಳುವ ಸಾಧ್ಯತೆಯಿದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಆಗಸ್ಟ್ ತಿಂಗಳಲ್ಲಿ ಕೈ ಕೊಟ್ಟಿರುವ ನೈರುತ್ಯ ಮುಂಗಾರು ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಚುರುಕುಗೊಳುವ ಸಾಧ್ಯತೆಯಿದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ ನಲ್ಲಿ ವಾಡಿಕೆ ಮಳೆ ಆಗುವ ಸಾಧ್ಯತೆಯಿದೆ. ಧೀರ್ಘವಾಧಿಯ ಸರಾಸರಿ ಮಳೆ ಪ್ರಮಾಣ 167.9 ಮಿ.ಮೀ ನ ಶೇಕಡ 91. 109 ರಷ್ಟು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ವರ್ಚುಯಲ್ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಮೊಹಾಪಾತ್ರ, ಸೆಪ್ಟೆಂಬರ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿದ್ದರೂ, ಜೂನ್-ಸೆಪ್ಟೆಂಬರ್ ಅವಧಿಯಲ್ಲಿನ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯೇ ಇರಲಿದೆ ಎಂದು ಹೇಳಿದರು.

ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೊ ಪರಿಸ್ಥಿತಿಗಳ ಬೆಳವಣಿಗೆಯು ಆಗಸ್ಟ್‌ನಲ್ಲಿ ಮಳೆ ಕೊರತೆ ಹಿಂದಿನ ಪ್ರಮುಖ ಅಂಶವಾಗಿದೆ. ಆದಾಗ್ಯೂ, ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮುದ್ರ ಮೇಲ್ಮೈ ತಾಪಮಾನದಲ್ಲಿನ ವ್ಯತ್ಯಾಸ  ಧನಾತ್ಮಕವಾಗಿ ಬದಲಾಗಲು ಪ್ರಾರಂಭಿಸಿದ್ದು, ಇದು ಎಲ್ ನಿನೋ ಪ್ರಭಾವವನ್ನು ಎದುರಿಸಬಹುದಾಗಿದೆ. ಉಷ್ಣವಲಯ ಪ್ರದೇಶದಲ್ಲಿನ ಮಳೆಯು ಸಹ ಅನುಕೂಲಕರವಾಗಿ ಬದಲಾಗುತ್ತಿದ್ದು, ನೈರುತ್ಯ ಮುಂಗಾರು ಮತ್ತೆ ಚುರುಕುಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಮೊಹಪಾತ್ರ ವಿವರಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com