ಮಿಜೋರಾಂ ವಿಧಾನಸಭಾ ಚುನಾವಣೆ: ಮತ ಎಣಿಕೆ ಸೋಮವಾರಕ್ಕೆ ಮುಂದೂಡಿಕೆ

ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 3 ಭಾನುವಾರದಂದು ಮತ ಎಣಿಕೆಗೆ ಚುನಾವಣಾ ಆಯೋಗ ನಿರ್ಧರಿಸಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 3 ಭಾನುವಾರದಂದು ಮತ ಎಣಿಕೆಗೆ ಚುನಾವಣಾ ಆಯೋಗ ನಿರ್ಧರಿಸಿತ್ತು.

ಆದರೆ, ಕ್ರಿಶ್ಚಿಯನ್ ಬಹುಸಂಖ್ಯಾತ ರಾಜ್ಯವಾದ ಮಿಜೋರಾಂನ ಜನರಿಗೆ ಭಾನುವಾರ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ ಎಂಬ ಕಾರಣಕ್ಕಾಗಿ  ಎಣಿಕೆ ದಿನಾಂಕವನ್ನು ಬದಲಾಯಿಸುವಂತೆ ವಿವಿಧ ವಲಯಗಳಿಂದ ಮನವಿ ಮಾಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.

'ಈ ಮನವಿಗಳನ್ನು ಪರಿಗಣಿಸಿದ ಆಯೋಗ ಮಿಜೋರಾಂನ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ದಿನಾಂಕವನ್ನು ಡಿಸೆಂಬರ್ 3 ರ ಬದಲಿಗೆ 4 ರಂದು ಸೋಮವಾರ ನಡೆಸುವುದಾಗಿ ಆಯೋಗ ತಿಳಿಸಿದೆ. 

ಕಳೆದ ತಿಂಗಳು ವಿಧಾನಸಭಾ ಚುನಾವಣೆ ನಡೆದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮತ ಎಣಿಕೆ ಭಾನುವಾರ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com