Chhattisgarh elections results: ಛತ್ತೀಸಗಢದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಬಲದ ಹೋರಾಟ

ಭಾರತೀಯ ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಛತ್ತೀಸ್‌ಗಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಡುವೆ ನಿಕಟ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಸಿಐ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ-ಕಾಂಗ್ರೆಸ್
ಬಿಜೆಪಿ-ಕಾಂಗ್ರೆಸ್

ರಾಯಪುರ: ಭಾರತೀಯ ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಛತ್ತೀಸ್‌ಗಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಡುವೆ ನಿಕಟ ಹೋರಾಟಕ್ಕೆ ಸಾಕ್ಷಿಯಾಗಿದೆ.

ಇಸಿಐ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದ 90 ಸದಸ್ಯ ಬಲದ ವಿಧಾನಸಭೆಯ ಮ್ಯಾಜಿಕ್ ನಂಬರ್ 46 ಆಗಿದೆ.

ಇಸಿಐ ಅಂಕಿಅಂಶಗಳ ಪ್ರಕಾರ, ಜಿಜಿಪಿ ಮತ್ತು ಸಿಪಿಐ ಪಕ್ಷ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. 90 ಸದಸ್ಯ ಬಲದ ವಿಧಾನಸಭೆಗೆ ಜನಾದೇಶ ಬಯಸಿ ಒಟ್ಟು 1,181 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಈ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು 2024ರ ಲೋಕಸಭೆ ಚುನಾವಣೆಗೂ ಮುನ್ನ ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ.

ಛತ್ತೀಸಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ನವೆಂಬರ್ 7 ರಂದು 20 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಿತು. ಇಲ್ಲಿ ವೇಳೆ  223 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರೆ, 958 ಅಭ್ಯರ್ಥಿಗಳಿರುವ ಉಳಿದ ಕ್ಷೇತ್ರಗಳಲ್ಲಿ ನವೆಂಬರ್ 17 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಿತು.

ಎರಡೂ ಹಂತಗಳ ಒಟ್ಟು ಮತದಾನದ ಪ್ರಮಾಣವು ಶೇ 76.31 ರಷ್ಟಿದ್ದು, 2018ರ ಚುನಾವಣೆಗಿಂತ ಸ್ವಲ್ಪ ಕಡಿಮೆಯಾಗಿದೆ. ಮೊದಲ ಹಂತದಲ್ಲಿ ಶೇ 78ರಷ್ಟು ಮತದಾನವಾಗಿದ್ದು, ಎರಡನೇ ಹಂತದಲ್ಲಿ ಶೇ 75.88ರಷ್ಟು ಮತದಾನವಾಗಿದೆ.

2023ರ ಛತ್ತೀಸ್‌ಗಢ ಚುನಾವಣೆಗಳಲ್ಲಿ ನಾಲ್ಕು ಪ್ರಮುಖ ಸ್ಪರ್ಧಿಗಳೆಂದರೆ ಬಿಜೆಪಿ, ಕಾಂಗ್ರೆಸ್, ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆಸಿಸಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ). ಇತರ ಪ್ರಾದೇಶಿಕ ಸಂಘಟನೆಗಳಾದ ಗೊಂಡ್ವಾನಾ ಗಂತಂತ್ರ ಪಾರ್ಟಿ (ಜಿಜಿಪಿ), ಹಮರ್ ರಾಜ್ ಪಾರ್ಟಿ (ಎಚ್‌ಆರ್‌ಪಿ) ಮತ್ತು ಎಡಪಕ್ಷಗಳು ಕೂಡ ಸ್ಪರ್ಧೆಯಲ್ಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com