ಕೇರಳ ಸ್ಫೋಟ: ಗಾಯಗೊಂಡಿದ್ದ ವ್ಯಕ್ತಿ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

ಕೇರಳದ ಕಲಮಸ್ಸೆರಿ ಸ್ಫೋಟದಲ್ಲಿ ಗಾಯಗೊಂಡಿದ್ದ 78 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ನಂತರ ಮೃತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೊಡುಪುಳ ವಂದಮಟ್ಟಂ ಕುಲಂಗರತೊಟ್ಟಿಯಿಲ್ ನಿವಾಸಿ ಕೆ.ಎ.ಜೋನಾ ಶನಿವಾರ ಮೃತಪಟ್ಟಿದ್ದಾರೆ.
ಸ್ಫೋಟದ ಚಿತ್ರ
ಸ್ಫೋಟದ ಚಿತ್ರ

ಕೊಚ್ಚಿ: ಕೇರಳದ ಕಲಮಸ್ಸೆರಿ ಸ್ಫೋಟದಲ್ಲಿ ಗಾಯಗೊಂಡಿದ್ದ 78 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ನಂತರ ಮೃತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೊಡುಪುಳ ವಂದಮಟ್ಟಂ ಕುಲಂಗರತೊಟ್ಟಿಯಿಲ್ ನಿವಾಸಿ ಕೆ.ಎ.ಜೋನಾ ಶನಿವಾರ ಮೃತಪಟ್ಟಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡಿರುವ ಅವರ ಪತ್ನಿ ಲಿಲಿ ಜೋನಾ, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಚ್ಚಿ ಬಾಂಬ್ ಸ್ಫೋಟದ ಆರೋಪಿ ಡೊಮಿನಿಕ್ ಮಾರ್ಟಿನ್ ನನ್ನು ಕೇರಳ ಕೋರ್ಟ್ ಬುಧವಾರ ಡಿಸೆಂಬರ್ 26 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಕ್ಟೋಬರ್ 29 ರಂದು ಪ್ರಾರ್ಥನಾ ಸಭೆಗಾಗಿ 2,000 ಕ್ಕೂ ಹೆಚ್ಚು ಮಂದಿ ಸೇರಿದ್ದ ಕಲಮಸ್ಸೆರಿಯ ಝಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ  ಸ್ಫೋಟ ನಡೆದಿತ್ತು. ಇದರ ಹೊಣೆ ಹೊತ್ತು ಫೇಸ್‌ಬುಕ್‌ನಲ್ಲಿ ಸ್ವಯಂ-ನಿರ್ಮಿತ ವೀಡಿಯೊ ಪೋಸ್ಟ್ ಮಾಡಿದ ನಂತರ ಪೊಲೀಸರು ಮಾರ್ಟಿನ್‌ನನ್ನು ಬಂಧಿಸಿದ್ದರು. 

ಈ ಸ್ಫೋಟದಲ್ಲಿ 12 ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ರಿಮೋಟ್ ನಿಯಂತ್ರಿತ ಸುಧಾರಿತ ಸ್ಫೋಟಕ ಸಾಧನದಿಂದ ಈ ಸ್ಫೋಟ ಸಂಭವಿಸಿದೆ ಎಂದು ಕೇರಳ ಪೊಲೀಸರು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com