ರಾಜ್ಯಗಳಲ್ಲಿ ಮುನ್ನುಗ್ಗುತ್ತಿರುವ ಬಿಜೆಪಿ: ಪ್ರಧಾನಿ ಮೋದಿ ಕೊಂಡಾಡುತ್ತಿರುವ ಬಿಜೆಪಿ ನಾಯಕರು, #ModiKiGuarantee ಫುಲ್‌ ಟ್ರೆಂಡ್‌

ಪಂಚ ರಾಜ್ಯಗಳ ಚುನಾವಣೆಗಳ ಪೈಕಿ ಇಂದು 4 ರಾಜ್ಯಗಳ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದೆ. ಈ ನಡುವಲ್ಲೇ ಬಿಜೆಪಿ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ModiKiGuarantee ಫುಲ್‌ ಟ್ರೆಂಡ್‌ ಆಗಿದೆ.
ಬಿಜೆಪಿ ಪೋಸ್ಟರ್.
ಬಿಜೆಪಿ ಪೋಸ್ಟರ್.

ಬೆಂಗಳೂರು/ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗಳ ಪೈಕಿ ಇಂದು 4 ರಾಜ್ಯಗಳ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದೆ. ಈ ನಡುವಲ್ಲೇ ಬಿಜೆಪಿ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ModiKiGuarantee ಫುಲ್‌ ಟ್ರೆಂಡ್‌ ಆಗಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಘೋಷಣೆಗಳು ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ ಪಂಚ ರಾಜ್ಯಗಳ ಚುನಾವಣೆಯಲ್ಲೂ ಇದೇ ಅಸ್ತ್ರ ಪ್ರಯೋಗಿಸಿ, ಗೆಲುವಿನ ವಿಶ್ವಾಸ ಇಟ್ಟುಕೊಂಡಿತ್ತು. ಹೀಗಾಗಿ ಕಾಂಗ್ರೆಸ್‌ ಪ್ರಚಾರಕ್ಕೆ ಪರ್ಯಾಯವಾಗಿ ಬಿಜೆಪಿ ಮೋದಿ ಅವರನ್ನೇ ಹೆಚ್ಚು ಬಿಂಬಿಸಿತ್ತು. ಅಷ್ಟೇ ಅಲ್ಲದೇ ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಗ್ಯಾರಂಟಿಗಳು ಕೆಲಸ ಮಾಡುವುದಿಲ್ಲ ಎಂದು ಮೋದಿಯವರೂ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳುತ್ತಿದ್ದರು.

ನನ್ನ ಮೂರನೇ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಮೂರು ಆರ್ಥಿಕತೆಯಲ್ಲಿ ಭಾರತದ ಹೆಸರು ಇರಲಿದೆ. ಇದು ಮೋದಿ ನೀಡುವ ಗ್ಯಾರಂಟಿ ಎಂದು ಭಾಷಣ ಮಾಡಿದ್ದರು.

ಲೋಕಸಭಾ ಚುನಾವಣೆ ನಡೆಯುವ ಮುನ್ನ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಹಿಂದಿ ಬೆಲ್ಟ್‌ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುುವಿನತ್ತ ಸಾಗಿದೆ.

ಈ ಬೆಳವಣಿಗೆ ನಡುವಲ್ಲೇ ಸಾಮಾಜಿಕ ಜಾಲತಾಣದಲ್ಲಿ #ModiKiGuarantee ಟ್ರೆಂಡ್‌ ಆಗಿದೆ. ದೇಶಕ್ಕೆ “ನಮೋ‌” ಗ್ಯಾರಂಟಿ. ಪ್ರಧಾನಿ ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ಕರ್ನಾಟಕ ಬಿಜೆಪಿ ಪೋಸ್ಟ್‌ ಮಾಡಿದೆ. ರಾಜ್ಯ ಬಿಜೆಪಿಯಷ್ಟೇ ಅಲ್ಲದೆ, ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್, ನಿತಿನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಅಮಿತ್ ಮಾಳವೀಯಾ, ಸಂಬಿತ್ ಪಾತ್ರ, ಕಿರಣ್ ರಿಜಿಜು, ರವಿಶಂಕರ್ ಪ್ರಸಾದ್, ಮೋದಿಯವರನ್ನು ಕೊಂಡಾಡಿ ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com