ಶಿಮ್ಲಾದಲ್ಲಿ ಭೀಕರ ರಸ್ತೆ ಅಪಘಾತ: ಕಮರಿಗೆ ಉರುಳಿದ ಪಿಕಪ್ ವಾಹನ, 6 ಮಂದಿ ಕಾರ್ಮಿಕರು ಸಾವು

ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಸುನ್ನಿ ಬಳಿ‌ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಮರಿಗೆ ಪಿಕಪ್ ವಾಹನ ಉರುಳಿದ ಪರಿಣಾಮ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಸುನ್ನಿ ಬಳಿ‌ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಮರಿಗೆ ಪಿಕಪ್ ವಾಹನ ಉರುಳಿದ ಪರಿಣಾಮ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರನ್ನು ಫರೀದ್, ಗುಲಾಬ್, ಸಾಹ್ಬೀರ್ ಮತ್ತು ತಾಲಿಬ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ಸುನ್ನಿ ಪಟ್ಟಣದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕರಾರ್‌ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದಿಂದ ಬಂದಿರುವ ಈ ಕಾರ್ಮಿಕರು ಮಂಡಿ ಜಿಲ್ಲೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇನ್ನು ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳು ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (ಐಜಿಎಂಸಿಎಚ್) ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ‌ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದಿಂದ ಬಂದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ದುರದೃಷ್ಟಕರ ಪಿಕಪ್ ಟ್ರಕ್‌ನ ಚಾಲಕನ ವಾಹನದ ನಿಯಂತ್ರಣ ಕಳೆದುಕೊಂಡು, ಸುಮಾರು 35 ಕಿಮೀ ದೂರದಲ್ಲಿರುವ ಕರಾರ್‌ಘಾಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com