
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ವಿವಿಧ ವಿರೋಧ ಪಕ್ಷಗಳ ನಾಯಕರು ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಇಂದು ಭೇಟಿಯಾಗಲಿದ್ದಾರೆ.
INDIA ಮೈತ್ರಿಕೂಟದ ವಿವಿಧ ನಾಯಕರು ಸಂಸತ್ ಭವನದಲ್ಲಿರುವ ಖರ್ಗೆ ಅವರ ಚೇಂಬರ್‌ನಲ್ಲಿ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರವನ್ನು ತರಾಟೆಗ ತೆಗೆದುಕೊಳ್ಳಲು ಉಭಯ ಸದನಗಳಲ್ಲಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷದ ನಾಯಕರು ಸಂಸತ್ತಿನ ಅಧಿವೇಶನಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇರುವುದರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಬಿರುಸಿನಿಂದ ಆರಂಭವಾಗುವ ಸಾಧ್ಯತೆ ಇದೆ.
ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಇದು ಕೊನೆಯ ಪೂರ್ಣ ಅಧಿವೇಶನವಾಗಿದೆ ಮತ್ತು ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ ಬಾಕಿ ಇರುವ ಬಿಲ್ ಗಳನ್ನು ತೆರವುಗೊಳಿಸಲು ಬಿಜೆಪಿ ಬಯಸಿದೆ. ಸಂಸತ್ತಿನ ಮುಂದೆ ಬಾಕಿ ಉಳಿದಿರುವ ಮಸೂದೆಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯ ಜೊತೆಗೆ ಐಪಿಸಿ, ಕ್ರಿಮಿನಲ್ ದಂಡ ಸಂಹಿತೆ ಮತ್ತು ಸಾಕ್ಷಿ ಕಾಯ್ದೆಯನ್ನು ಬದಲಿಸುವ ಹೊಸ ಮಸೂದೆಗಳು ಸೇರಿವೆ.
Advertisement