ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಲಾಲ್ದುಹೋಮಾಗೆ ಮಿಜೋರಾಂ ಸಿಎಂ ಪಟ್ಟ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಆಡಳಿತರೂಢ ಎಂಎನ್‌ಎಫ್‌ ಸೋಲು ಅನುಭವಿಸಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM) ಪಕ್ಷ ಸ್ಪಷ್ಟ ಬಹುಮತದೊಂದಿಗೆ
ಲಾಲ್ಡುಹೋಮಾ
ಲಾಲ್ಡುಹೋಮಾ

ಐಜ್ವಾಲ್: ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಆಡಳಿತರೂಢ ಎಂಎನ್‌ಎಫ್‌ ಸೋಲು ಅನುಭವಿಸಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM) ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.

ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭದ್ರತೆಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಲಾಲ್ದುಹೋಮಾ ಅವರು ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM)ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಭರ್ಜರಿ ಗೆಲುವಿನೊಂದಿಗೆ ಸಿಎಂ ಪಟ್ಟವೇರಲು ಸಜ್ಜಾಗಿದ್ದಾರೆ.

2019 ರಲ್ಲಿ ರಾಜಕೀಯ ಪಕ್ಷವಾಗಿ ನೋಂದಾಯಿಸಲ್ಪಟ್ಟ ZPM ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ZPM ಗೆದ್ದುಕೊಂಡಿದ್ದು, ಮತ್ತೊಂದರಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ(EC) ತಿಳಿಸಿದೆ.

ಲಾಲ್ದುಹೋಮಾ ಅವರು ಎಮ್‌ಎನ್‌ಎಫ್ ಅಭ್ಯರ್ಥಿ ಜೆ ಮಲ್ಸಾವ್ಮ್‌ಜುವಾಲಾ ವಂಚೌಂಗ್ ಅವರ ವಿರುದ್ಧ 2,982 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಮೂರು ದಶಕಗಳಿಂದ, ಈಶಾನ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯು ಇಬ್ಬರು ಹಿರಿಯ ರಾಜಕಾರಣಿಗಳ ನಡುವೆ-ಕಾಂಗ್ರೆಸ್‌ನ ಲಾಲ್ ಥನ್ಹಾವ್ಲಾ ಮತ್ತು ಎಂಎನ್‌ಎಫ್‌ನ ಜೋರಮ್‌ತಂಗಾ ನಡುವಿನ ಸಂಬಂಧವಾಗಿದೆ.

ಲಾಲ್ದುಹೋಮಾ ಅವರು 1984 ರಲ್ಲಿ ಕಾಂಗ್ರೆಸ್ ನಿಂದ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ ಅದೇ ವರ್ಷ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದರು.

1986ರಲ್ಲಿ ಆಗಿನ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ಮತ್ತು ಕೆಲವು ಕ್ಯಾಬಿನೆಟ್ ಮಂತ್ರಿಗಳ ವಿರುದ್ಧ ಪಿತೂರಿ ನಡೆಸಿದ ಆರೋಪದ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

1988 ರಲ್ಲಿ ಕಾಂಗ್ರೆಸ್ ತೊರೆದ ಲಾಲ್ದುಹೋಮಾ ಅವರು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿದ್ದರು. ಈ ಮೂಲಕ ಪಕ್ಷಾಂತರ-ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ ಎಂಬ ಕುಖ್ಯಾತಿಗೆ ಪಾತ್ರರಾದರು. ನಂತರ ಜೋರಾಮ್ ನ್ಯಾಶನಲಿಸ್ಟ್ ಪಾರ್ಟಿ ಸ್ಥಾಪಿಸಿದ 73 ವರ್ಷದ  ಲಾಲ್ದುಹೋಮಾ ಅವರು ಈಗ ಮಿಜೋರಾಂ ಮುಖ್ಯಮಂತ್ರಿ ಗಾದಿಗೆ ಏರುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com