ಮುಂದಿನ ಸರ್ಕಾರದ ಭಾಗವಾಗುತ್ತೇವೆ: ಮಿಜೋರಾಂ ಬಿಜೆಪಿ ಮುಖ್ಯಸ್ಥ

ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಐಜ್ವಾಲ್ : ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. 

ನಾವು ಮೂರು ಸ್ಥಾನ ಗೆಲ್ಲುವುದು ಖಚಿತ, ಐದಕ್ಕಿಂತ ಹೆಚ್ಚು ಸ್ಥಾನಗಳ ನಿರೀಕ್ಷೆಯಲ್ಲಿದ್ದೇವೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಸದ್ಯದಲ್ಲೇ ರಚನೆಯಾಗಲಿರುವ ಹೊಸ ಸರ್ಕಾರದಲ್ಲಿ ಬಿಜೆಪಿ ಭಾಗವಹಿಸಲಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಕಳೆದ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನ ಗೆದ್ದಿತ್ತು. ಪಕ್ಷವು ಈ ಬಾರಿ 23 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು.

ಬಹುತೇಕ ಎಕ್ಸಿಟ್ ಪೋಲ್‌ಗಳು ಮಿಜೋರಾಂನಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೇ ಅತಂತ್ರ ವಿಧಾನಸಭೆಯ ಮುನ್ಸೂಚನೆ ನೀಡಿವೆ.  ಈ ಪ್ರದೇಶದಲ್ಲಿ ಆಡಳಿತಾರೂಢ ಎಂಎನ್‌ಎಫ್ ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿದ್ದರೂ ಮತ್ತು ಕೇಂದ್ರದಲ್ಲಿ ಎನ್‌ಡಿಎಗೆ ಬೆಂಬಲ ನೀಡಿದ್ದರೂ, ರಾಜ್ಯದಲ್ಲಿ ಎರಡು ಪಕ್ಷಗಳು ಪರಸ್ಪರ ದೂರವೇ ಉಳಿದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com