INDIA ಮೈತ್ರಿಕೂಟದ ಸಭೆಗೆ ಅಖಿಲೇಶ್ ಯಾದವ್ ಗೈರು; ಎಸ್ಪಿ ನಾಯಕ ರಾಮಗೋಪಾಲ್ ಭಾಗಿ ಸಾಧ್ಯತೆ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಅವರು...
ಇಂಡಿಯಾ ಮೈತ್ರಿಕೂಟದ ಸಭೆ
ಇಂಡಿಯಾ ಮೈತ್ರಿಕೂಟದ ಸಭೆ

ಲಖನೌ/ನವದೆಹಲಿ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಅವರು ಮಂಗಳವಾರ ಹೇಳಿದ್ದಾರೆ.

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆಯೇ ಎಂದು ಕೇಳಿದಾಗ, ಈ ಹಿಂದೆ ಸಭೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

"ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಾಳೆ ಇಂಡಿಯಾ ಬ್ಲಾಕ್‌ನ ಸಭೆಯಲ್ಲಿ ಭಾಗವಹಿಸುವ ಯಾವುದೇ ಯೋಜನೆ ಹೊಂದಿಲ್ಲ. ಪ್ರೊ. ರಾಮ್ ಗೋಪಾಲ್ ಯಾದವ್ ಅಥವಾ ರಾಷ್ಟ್ರೀಯ ಅಧ್ಯಕ್ಷರು ಸೂಚಿಸುವ ಯಾವುದೇ ನಾಯಕರು ಸಭೆಗೆ ಹೋಗುತ್ತಾರೆ" ಎಂದು ಚೌಧರಿ ಪಿಟಿಐಗೆ ತಿಳಿಸಿದರು.

ಏತನ್ಮಧ್ಯೆ, ದೆಹಲಿಯಲ್ಲಿ ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಅವರು, ಅಖಿಲೇಶ್ ಯಾದವ್ ಅವರು ಗೈರು ಆದರೂ ನಮ್ಮ ಪಕ್ಷ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುತ್ತದೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪೂರ್ವಾಂಚಲ ಪ್ರದೇಶದಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

"ನಮ್ಮ ನಾಯಕರು ಪೂರ್ವ ನಿಯೋಜಿತ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಈ ಸಭೆಯನ್ನು ಇದ್ದಕ್ಕಿದ್ದಂತೆ ಘೋಷಿಸಲಾಗಿದೆ. ಅಖಿಲೇಶ್ ಅವರು ಪೂರ್ವಾಂಚಲ್‌ನಲ್ಲಿ ಕೆಲವು ಕಾರ್ಯಕ್ರಮಗಳಿರುವುದರಿಂದ ಅವರು ಭಾಗವಹಿಸುವುದಿಲ್ಲ, ನಾನು(ಸಭೆಗೆ) ಹಾಜರಾಗುತ್ತೇನೆ" ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com