
ಭೋಪಾಲ್: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದ್ದು, ಪಕ್ಷದ ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.
ಈ ಮಧ್ಯೆ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.
ನಾನು ಈ ಹಿಂದೆಯೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಇವತ್ತೂ ಆಕಾಂಕ್ಷಿ ಆಗಿಲ್ಲ. ಒಬ್ಬ ಕಾರ್ಯಕರ್ತನಾಗಿ ಪಕ್ಷ ನೀಡುವ ಯಾವುದೇ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕ ಮತ್ತು ನಾನು ಅವರೊಂದಿಗೆ ಕೆಲಸ ಮಾಡಲು ಯಾವಾಗಲೂ ಹೆಮ್ಮೆ ಪಡುತ್ತೇನೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ.
ಪ್ರಧಾನಿ ಮೋದಿಯವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಬಿಜೆಪಿ ನಾಯಕ ಹೇಳಿಕೊಂಡಿದ್ದಾರೆ.
“ಪ್ರಧಾನಿ ಮೋದಿ ನಮ್ಮ ನಾಯಕ ಮತ್ತು ಅವರೊಂದಿಗೆ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ವೈಭವಯುತ, ಸಮೃದ್ಧ ಮತ್ತು ಶಕ್ತಿಯುತ ಭಾರತವನ್ನು ನಿರ್ಮಿಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ.
Advertisement