ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಮಧ್ಯಪ್ರದೇಶ: 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ, 34 ಮಂದಿ ವಿರುದ್ಧ ಗಂಭೀರ ಆರೋಪ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ.

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ. 

ಅಂದರೆ ಶಾಸನ ಸಭೆಯ ಶೇ.39 ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ಗಳಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ತಿಳಿಸಿದೆ.

ಇನ್ನು 34 ಶಾಸಕರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿದ್ದು, 5 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾಗುವ ಸಾಧ್ಯತೆ ಇರುವ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

2018 ರ ಚುನಾವಣೆಯಲ್ಲಿ 94 ಶಾಸಕರು ಅಥವಾ ಶೇ.41 ರಷ್ಟು ಮಂದಿಗೆ ಕ್ರಿಮಿನಲ್ ಹಿನ್ನೆಲೆ ಇತ್ತು ಎಂದು ಎಡಿಆರ್ ವರದಿ ಮೂಲಕ ತಿಳಿದುಬಂದಿದೆ. ಈ ಚುನಾವಣೆಯಲ್ಲಿ 230 ಮಂದಿ ಸದಸ್ಯಬಲದ ವಿಧಾನಸಭೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವವರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕಡಿಮೆಯಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com