ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ 10 ಬಿಜೆಪಿ ಸಂಸದರು ರಾಜೀನಾಮೆ

ಇತ್ತೀಚಿಗೆ ನಡೆದ ಹಿಂದಿಯ ಹೃದಯಭಾಗದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ  ಸಂಸದರು ಬುಧವಾರ ಸಂಸತ್ತಿಗೆ ರಾಜೀನಾಮೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಇತ್ತೀಚಿಗೆ ನಡೆದ ಹಿಂದಿಯ ಹೃದಯಭಾಗದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ  ಸಂಸದರು ಬುಧವಾರ ಸಂಸತ್ತಿಗೆ ರಾಜೀನಾಮೆ ನೀಡಿದ್ದಾರೆ.

ಸದ್ಯಕ್ಕೆ ಒಟ್ಟು 10 ಸಂಸದರು ರಾಜೀನಾಮೆ ನೀಡಿದ್ದಾರೆ. ಮತ್ತಿಬ್ಬರು ಸಂಸದರಾದ ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇಂದು ಸದನಕ್ಕೆ ಬಂದಿರಲಿಲ್ಲ. 

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಸಂಸದರ ನಿಯೋಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದೆ.

ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಭೆಯ ನಂತರ 10 ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದ ನರಸಿಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ಪ್ರಲ್ಹಾದ್ ಸಿಂಗ್ ಪಟೇಲ್, "ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಶೀಘ್ರದಲ್ಲೇ ಕೇಂದ್ರ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ" ಎಂದು ಎಎನ್‌ಐಗೆ ತಿಳಿಸಿದ್ದಾರೆ.

ಮಾಜಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಭಾರತದ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, ಲೋಕಸಭಾ ಸಂಸದರಾದ ರಾಕೇಶ್ ಸಿಂಗ್, ಉದಯ್ ಪ್ರತಾಪ್ ಮತ್ತು ರಿತಿ ಪಾಠಕ್ ಅವರು ಮಧ್ಯ ಪ್ರದೇಶ ಶಾಸಕರಾಗಿ ಆಯ್ಕೆಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com