ರಜೌರಿಯಲ್ಲಿ ಮಗುಚಿ ಬಿದ್ದ ಬಸ್: ಓರ್ವ ಸಾವು, 22 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬಸ್ ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 14 ವಿದ್ಯಾರ್ಥಿಗಳು ಸೇರಿ 22 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬಸ್ ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 14 ವಿದ್ಯಾರ್ಥಿಗಳು ಸೇರಿ 22 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ ತಂಡಿಕಾಸ್ಸಿ ಗ್ರಾಮದ ರಾಧಾ ಸೋಮಿ ಆಶ್ರಮದ ಬಳಿ ಅಪಘಾತ ಸಂಭವಿಸಿದೆ.

ಮಂಜಕೋಟೆಯಿಂದ ರಜೌರಿಗೆ ತೆರಳುತ್ತಿದ್ದ ಬಸ್ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಗಾಯಾಳುಗಳನ್ನು ರಜೌರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com