ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಪತ್ತೆ; ಆತ್ಮಹತ್ಯೆ ಶಂಕೆ

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದುರ್ಗ್: ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಸುಶೀಲ್ ದಾಸ್ (62) ಮೃತದೇಹ ಮಂಗಳವಾರ ಮಧ್ಯಾಹ್ನ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆಯಾಗಿ ಕಂಡುಬಂದಿದೆ ಎಂದು ದುರ್ಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಗೋಪಾಲ್ ಗಾರ್ಗ್ ತಿಳಿಸಿದ್ದಾರೆ.

ಮೃತರನ್ನು ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವ ನಗದು ಕೊರಿಯರ್ ಆಗಿದ್ದ ಆಸಿಮ್ ದಾಸ್ ಅವರ ತಂದೆ ಎನ್ನಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸುಶೀಲ್ ದಾಸ್ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ಗಾರ್ಗ್ ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತಿದೆ. ಆದರೆ, ಸಾವಿನ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಅಸೀಮ್ ದಾಸ್ ಮತ್ತು ಮತ್ತೊಬ್ಬ ಆರೋಪಿಯಾದ ಕಾನ್‌ಸ್ಟೆಬಲ್ ಭೀಮ್ ಸಿಂಗ್ ಯಾದವ್ ಅವರನ್ನು ನವೆಂಬರ್ 3 ರಂದು ಇ.ಡಿ ಬಂಧಿಸಿತ್ತು.

ಫೊರೆನ್ಸಿಕ್ ವಿಶ್ಲೇಷಣೆ ಮತ್ತು ಕ್ಯಾಶ್ ಕೊರಿಯರ್ ದಾಸ್ ನೀಡಿದ ಹೇಳಿಕೆಯು, ಛತ್ತೀಸಗಢದ ನಿರ್ಗಮಿತ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೆ ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು 508 ಕೋಟಿ ರೂ. ನೀಡಿರುವ ಕುರಿತು ಆರಂಭಿಕ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಬಘೇಲ್ ಅವರು ಈ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದು, ಬಿಜೆಪಿಯು ಇಡಿಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಅಸೀಮ್ ದಾಸ್‌‌ನನ್ನು ರಾಯ್ಪುರದಲ್ಲಿ ಬಂಧಿಸಿದ ಕೇಂದ್ರ ತನಿಖಾ ಸಂಸ್ಥೆಯು ಬಂಧಿತನಿಂದ 5.39 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com