ನಾಳೆ ಲೋಕಸಭೆ ಕಲಾಪಕ್ಕೆ ಹಾಜರಾಗುವಂತೆ ಬಿಜೆಪಿಯ ಎಲ್ಲಾ ಸಂಸದರಿಗೆ ವಿಪ್ ಜಾರಿ

ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ ಲೋಕಸಭೆಯ ತನ್ನ ಎಲ್ಲಾ ಸಂಸದರಿಗೆ ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಶುಕ್ರವಾರ ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ ಲೋಕಸಭೆಯ ತನ್ನ ಎಲ್ಲಾ ಸಂಸದರಿಗೆ ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಶುಕ್ರವಾರ ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ.

"ಕೆಲವು ಪ್ರಮುಖ ಮಸೂದೆಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು ಮತ್ತು ಸರ್ಕಾರದ ನಿಲುವನ್ನು ಬೆಂಬಲಿಸಲು ಡಿಸೆಂಬರ್ 8, 2023 ರಂದು ಲೋಕಸಭೆಯ ಎಲ್ಲಾ ಸಂಸದರಿಗೆ ಸದನದಲ್ಲಿ ಹಾಜರಿರಲು ಬಿಜೆಪಿ ವಿಪ್ ನೀಡುತ್ತಿದೆ" ಎಂದು ಬಿಜೆಪಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಇನ್ನು ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದ ನೈತಿಕ ಸಮಿತಿಯ ವರದಿಯನ್ನು ಸಹ ನಾಳೆ ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಸಂಸದೀಯ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com