ಕಾಶ್ಮೀರ: ಕ್ರಿಕೆಟ್ ಆಡುತ್ತಿದ್ದ ವೇಳೆ ಉಗ್ರರಿಂದ ಗುಂಡಿನ ದಾಳಿ; ಗಾಯಗೊಂಡಿದ್ದ ಪೋಲೀಸ್ ಅಧಿಕಾರಿ ಸಾವು

ಕಳೆದ ಅಕ್ಟೋಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಲಷ್ಕರ್-ಎ-ತೊಯ್ಬಾ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಳೆದ ಅಕ್ಟೋಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಲಷ್ಕರ್-ಎ-ತೊಯ್ಬಾ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪೊಲೀಸ್ ಅಧಿಕಾರಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಪತ್ನಿಯನ್ನು ಅಗಲಿದ್ದಾರೆ.

ವೈದ್ಯಕೀಯ ತಂಡದ ಉತ್ತಮ ಪ್ರಯತ್ನಗಳ ಹೊರತಾಗಿಯೂ, ವಾನಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ನ ಪುತ್ರ ವಾನಿ ಅವರು ಅಕ್ಟೋಬರ್ 29 ರಂದು ಭಾನುವಾರ ಈದ್ಗಾ ಮೈದಾನದಲ್ಲಿ ಹಲವು ಯುವಕರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಏಕಾಂಗಿ ಅವರ ಕಣ್ಣು, ಹೊಟ್ಟೆ ಮತ್ತು ಕುತ್ತಿಗೆಗೆ ಮೂರು ಗುಂಡುಗಳನ್ನು ಹಾರಿಸಿದ್ದರು. 

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾನಿ ಅವರನ್ನು ಸೌರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ವಿಮಾನದ ಮೂಲಕ ದೆಹಲಿಯ ಏಮ್ಸ್‌ಗೆ ಕರೆತರಲಾಗಿತ್ತು.

ವಾನಿ ಅವರ ಸಾವು ಅವರ ಸಹೋದ್ಯೋಗಿಗಳು ಮತ್ತು ಪ್ರೀತಿಪಾತ್ರರಲ್ಲಿ ಆಳವಾದ ನಷ್ಟವನ್ನು ಉಂಟುಮಾಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com