ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ: ಪ್ರಧಾನಿ ಮೋದಿ ಶುಭಾಶಯ

ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಎ. ರೇವಂತ್ ರೆಡ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರ ಸರ್ಕಾರ ನೀಡುತ್ತದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. 
ರೇವಂತ್ ರೆಡ್ಡಿ
ರೇವಂತ್ ರೆಡ್ಡಿ

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಎ. ರೇವಂತ್ ರೆಡ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರ ಸರ್ಕಾರ ನೀಡುತ್ತದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. 

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಎಲ್ ಬಿ ಸ್ಟೇಡಿಯಂನಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ಅಲ್ಲಿನ ನಾಗರಿಕರ ಕಲ್ಯಾಣಕ್ಕಾಗಿ ನಾನು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com