ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತ ಸುಪ್ರೀಂ ಕೋರ್ಟ್ ಆದೇಶ ಡಿಸೆಂಬರ್ 11 ಕ್ಕೆ 

ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ. 

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಕೋರ್ಟ್ ವೆಬ್ ಸೈಟ್ ನಲ್ಲಿ ತಿಳಿಸಲಾಗಿದೆ. ಪಂಚ ಸದಸ್ಯ ಪೀಠದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿಆರ್ ಗವಾಯಿ ಹಾಗೂ ನ್ಯಾ.ಸೂರ್ಯ ಕಾಂತ್ ಸಹ ಇದ್ದಾರೆ. 

16 ದಿನಗಳ ವಿಚಾರಣೆಯ ನಂತರ ಸೆ.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. 

ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಅರ್ಜಿ ಸಲ್ಲಿಸಿದ್ದವರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಹ್ಮಣೀಯಮ್, ರಾಜೀವ್ ಧವನ್, ಜಫರ್  ಶಾ, ದುಷ್ಯಂತ್ ದಾವೆ ವಾದಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com