ಹೈದರಾಬಾದ್‌ ಕ್ರೀಡಾಂಗಣದಲ್ಲಿ ವಿಜಯದ ರೌಂಡ್ಸ್ ಹಾಕಿದ ಸೋನಿಯಾ ಗಾಂಧಿ

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Updated on: 

ಹೈದರಾಬಾದ್‌: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಇಂದು ಹೈದರಾಬಾದ್‍ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಿದ್ದರು.

ರೇವಂತ್ ರೆಡ್ಡಿ ಅವರು ದೇಶದ ಅತ್ಯಂತ ಕಿರಿಯ ರಾಜ್ಯದ ಮೊದಲ ಕಾಂಗ್ರೆಸ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸೋನಿಯಾ ಗಾಂಧಿ ಅವರು ಕ್ರೀಡಾಂಗಣದಲ್ಲಿ  ತೆರೆದ ಜೀಪ್ ನಲ್ಲಿ ಒಂದು ಸುತ್ತು ವಿಜಯದ ರೌಂಡ್ಸ್ ಹಾಕಿದರು.
 
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಹೈದರಾಬಾದ್‌ನ ಕ್ರೀಡಾಂಗಣದ ಹೊರಗೆ ಜಾನಪದ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com