ಜ್ಞಾನವಾಪಿ ಮಸೀದಿ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿದ ಅಲಹಾಬಾದ್...
ಜ್ಞಾನವ್ಯಾಪಿ ಆವರಣ
ಜ್ಞಾನವ್ಯಾಪಿ ಆವರಣ

ಅಲಹಾಬಾದ್: ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿದ ಅಲಹಾಬಾದ್ ಹೈಕೋರ್ಟ್, ತೀರ್ಪ ಕಾಯ್ದಿರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಅವರು ಕಕ್ಷಿದಾರರ ಪರ ವಕೀಲರ ವಾದ ಆಳಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದರು. ಪ್ರಕರಣದ ತೀರ್ಪಿನ ದಿನಾಂಕವನ್ನು ನ್ಯಾಯಾಲಯ ನಿರ್ಧರಿಸುತ್ತದೆ.

ವಾರಣಾಸಿಯ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಹಾಗೂ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾಯೋಗ್ಯತೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿವೆ.

ಪ್ರಸ್ತುತ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಪುರಾತನ ದೇವಾಲಯ ಮರುಸ್ಥಾಪಿಸುವಂತೆ ಕೋರಿ ದಾವೆ ಹೂಡಲಾಗಿದೆ. ಮಸೀದಿಯು ದೇವಾಲಯದ ಒಂದು ಭಾಗವಾಗಿತ್ತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com