
ಐಜ್ವಾಲ್: ಝೋರಂ ಪೀಪಲ್ಸ್ ಮೂವ್ ಮೆಂಟ್ ನ (ಝೆಡ್ ಪಿಎಂ) ಅಧ್ಯಕ್ಷ ಲಾಲ್ದುಹೋಮಾ ಅವರು ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇವರು ಈ ಅತ್ಯುನ್ನತ ಹುದ್ದೆಗೇರಿದ ಕಾಂಗ್ರೆಸ್ ಮತ್ತು ಎಂಎನ್ಎಫ್ ಯೇತರ ಮೊದಲ ನಾಯಕರಾಗಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ 11 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 40 ಸದಸ್ಯ ಬಲದ ಮಿಜೋರಾಂನಲ್ಲಿ ಝೆಡ್ ಪಿಎಂ ಪಕ್ಷ 27 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಬಹುಮತ ಸಾಧಿಸಿದೆ.
ಮಂಗಳವಾರ ಝೆಡ್ ಪಿಎಂ ಶಾಸಕಾಂಗ ಪಕ್ಷದ ನಾಯಕರಾಗಿ ಲಾಲ್ದುಹೋಮ ಆಯ್ಕೆಯಾಗಿದ್ದರು. ಅವರು ಮಾಜಿ ಐಪಿಎಸ್ ಅಧಿಕಾರಿಯಾಗಿದ್ದು, ಒಮ್ಮೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
2018 ರಲ್ಲಿ ರಾಜಕೀಯ ಪಕ್ಷವಾಗಿ ನೋಂದಾಯಿಸಲ್ಪಟ್ಟಿತ್ತು ಝೆಡ್ ಪಿಎಂ ಪಕ್ಷ , 2019ರ ಚುನಾವಣೆಯಲ್ಲಿ 8 ಸ್ಥಾನಗಳನ್ನು ಗೆದ್ದಿತ್ತು.
Advertisement