ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶುಕ್ರವಾರದಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ರೇವಂತ್ ರೆಡ್ಡಿ
ರೇವಂತ್ ರೆಡ್ಡಿ

ಹೈದರಾಬಾದ್: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶುಕ್ರವಾರದಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
 
ಲೋಕಸಭಾ ಸ್ಪೀಕರ್ ಓಮ್ ಬಿರ್ಲಾ ಗೆ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರೇವಂತ್ ರೆಡ್ಡಿ ಲೋಕಸಭೆಯಲ್ಲಿ ಮಲ್ಕಜ್ಗಿರಿ ಸಂಸತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.  ರೆಡ್ಡಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ರೆಡ್ಡಿ ಅವರು ಉಪಮುಖ್ಯಮಂತ್ರಿ ಮತ್ತು ಇತರ ಸಚಿವರೊಂದಿಗೆ ಗುರುವಾರ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com