ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಹೈದರಾಬಾದ್: ತೆಲಂಗಾಣ ರಾಜ್ಯ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು, ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ,
ಜಾರಿ ಬಿದ್ದ ಪರಿಣಾಮ ಮೂಳೆ ಮುರಿತದಿಂದ ಚಂದ್ರಶೇಖರ್ ರಾವ್ ಅವರು ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಸದ್ಯ ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಸಿಆರ್ ಅನಾರೋಗ್ಯದ ವಿಷಯ ತಿಳಿದ ತಕ್ಷಣ ಕುಟುಂಬಸ್ಥರೆಲ್ಲಾ ಆಸ್ಪತ್ರೆಗೆ ಧಾವಿಸಿದ್ದಾರೆ.
ಯಶೋಧಾ ಆಸ್ಪತ್ರೆಯ 9ನೇ ಮಹಡಿಯಲ್ಲಿ ಕೆಸಿಆರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ವೈದ್ಯರು ಪರೀಕ್ಷೆ ಮಾಡಿ ಹೆಲ್ತ್ ಬುಲೆಟಿನ್ ನೀಡಲಿದ್ದಾರೆ. ಸದ್ಯ ಕೆಸಿಆರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದ.
ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ