ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು!

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಪಕ್ಷದಿಂದ ಅಮಾನತುಗೊಳಿಸಿದೆ. ಕೆಲವು ತಿಂಗಳ ಹಿಂದೆ  ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನ ಒಳಗೆ ಅಧಿವೇಶನದಲ್ಲಿ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು.
ಸಂಸದ ಡ್ಯಾನಿಶ್ ಅಲಿ
ಸಂಸದ ಡ್ಯಾನಿಶ್ ಅಲಿ

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಪಕ್ಷದಿಂದ ಅಮಾನತುಗೊಳಿಸಿದೆ. ಕೆಲವು ತಿಂಗಳ ಹಿಂದೆ  ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನ ಒಳಗೆ ಅಧಿವೇಶನದಲ್ಲಿ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಡ್ಯಾನಿಶ್ ಅಲಿ ಅವರಿಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು ಎಂದು ಬಿಎಸ್‌ಪಿ ಹೇಳಿಕೆಯಲ್ಲಿ ತಿಳಿಸಿದೆ.

 "ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಮೊದಲೇ ಸ್ಪಷ್ಟಪಡಿಸಲಾಗಿತ್ತು. ನೀವು ಕೂಡಾ ಸ್ಪಷ್ಟಪಡಿಸುವುದು ಕಡ್ಡಾಯವಾಗಿದೆ. 2018ರಲ್ಲಿ ಕರ್ನಾಟಕದಲ್ಲಿ ದೇವೇಗೌಡರ ನೇತೃತ್ವದ ಜನತಾ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೀರಿ.
ಆ ಸಮಯದಲ್ಲಿ ಬಿಎಸ್‌ಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಪಕ್ಷಕ್ಕಾಗಿ ಕೆಲಸ ಮಾಡುತ್ತೀರಿ ಎಂಬ ಷರತ್ತುಗಳ ಅಡಿ ಅಮ್ರೋಹಾದಿಂದ ಟಿಕೆಟ್ ನೀಡಲಾಗಿತ್ತು ಎಂದು ಅಮಾನತು ನೋಟಿಸ್ ನಲ್ಲಿ ಹೇಳಲಾಗಿದೆ. 

ಅಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲು ಪಕ್ಷ ವಿರೋಧಿ ಚಟುವಟಿಕೆ ಉಲ್ಲೇಖಿಸಿರುವ ಬಿಎಸ್‌ಪಿ, ಆ ಸಮಯದಲ್ಲಿ ನೀಡಿದ ಭರವಸೆಗಳನ್ನು ನೀವು ಮರೆತಿದ್ದೀರಿ ಎಂದು ತೋರುತ್ತಿದೆ. ಆದ್ದರಿಂದ, ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಎಂದು ಹೇಳಿದೆ.

ಕಾಸಿಗಾಗಿ ಪ್ರಶ್ನೆ ಪ್ರಕರಣದಲ್ಲಿ ಟಿಎಂಸಿ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸುವ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳ ಸದಸ್ಯರೊಂದಿಗೆ ಡ್ಯಾಲಿ ಲೋಕಸಭೆ ಕಲಾಪದಿಂದ ಹೊರ ನಡೆದ  ಮಾರನೇ ದಿನವೇ ಬಿಎಸ್ ಪಿ ಈ ಕ್ರಮ ಕೈಗೊಂಡಿದೆ.

ಮತ್ತೊಂದೆಡೆ ತಮ್ಮ ಅಮಾನತು ಕುರಿತು ಪ್ರತಿಕ್ರಿಯಿಸಿರುವ ಡ್ಯಾನಿಶ್ ಅಲಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ನಿರ್ಧಾರ ದುರದೃಷ್ಟಕರ. ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಲ್ಲ. ಇದಕ್ಕೆ ನನ್ನ ಕ್ಷೇತ್ರದ ಜನರು ಸಾಕ್ಷಿಯಾಗಿದ್ದಾರೆ. ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿದ್ದೇನೆ ಮತ್ತು ಮುಂದೆಯೂ ಮಾಡುತ್ತೇನೆ. ಇದನ್ನು ಮಾಡುವುದು ಅಪರಾಧವಾದರೆ ಅದಕ್ಕೆ ಶಿಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com