ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್

ಬಿಜೆಪಿಗೆ ಮತ ಹಾಕಿದ್ದಕ್ಕೆ ಥಳಿತಕ್ಕೊಳಗಾಗಿದ್ದ ಮುಸ್ಲಿಂ ಮಹಿಳೆ ಭೇಟಿಯಾದ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಮತ್ತು ಕೇಸರಿ ಪಕ್ಷದ ಗೆಲುವಿನ ಸಂಭ್ರಮಾಚರಣೆ ಮಾಡಿದ್ದಕ್ಕೆ ತನ್ನ ಸೋದರ ಮಾವ ತನಗೆ ಥಳಿಸಿದ್ದಾರೆ ಎಂದು ಹೇಳಿಕೊಂಡಿದ್ದ ಮುಸ್ಲಿಂ ಮಹಿಳೆಯನ್ನು...

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಮತ್ತು ಕೇಸರಿ ಪಕ್ಷದ ಗೆಲುವಿನ ಸಂಭ್ರಮಾಚರಣೆ ಮಾಡಿದ್ದಕ್ಕೆ ತನ್ನ ಸೋದರ ಮಾವ ತನಗೆ ಥಳಿಸಿದ್ದಾರೆ ಎಂದು ಹೇಳಿಕೊಂಡಿದ್ದ ಮುಸ್ಲಿಂ ಮಹಿಳೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಭೇಟಿ ಮಾಡಿದ್ದಾರೆ.

ಹಂಗಾಮಿ ಸಿಎಂ ಚೌಹಾಣ್ ಅವರು, 30 ವರ್ಷದ ಮುಸ್ಲಿಂ ಮಹಿಳೆ ಸಮೀನಾ ಬಿ ಅವರನ್ನು ಇಂದು ಭೋಪಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಹ್ವಾನಿಸಿ ಸಾಂತ್ವನ ಹೇಳಿದರು.

ಮಹಿಳೆ ತನ್ನ ಪತಿಯ ಕಿರಿಯ ಸಹೋದರ ಜಾವೀದ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರಿಂದ ಪೊಲೀಸರು ಆತನನ್ನು ನಿನ್ನೆ ಬಂಧಿಸಿದ್ದಾರೆ. 

ಈ ಮುಸ್ಲಿಂ ಮಹಿಲೆ ಶಿವಾರಜ್ ಸಿಂಗ್ ಚೌಹಾಣ್ ಅವರ ತವರು ಜಿಲ್ಲೆ ಸೆಹೋರ್ ನವರಾಗಿದ್ದಾರೆ.

ಪೊಲೀಸರ ಪ್ರಕಾರ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮದಲ್ಲಿದ್ದ ಭಾಗಿಯಾಗಿದ್ದ ಸಮೀನಾ ಅವರನ್ನು ಸೋಮವಾರ ಜಾವೀದ್ ಥಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಜಾವೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಡ್ಲಿ ಬೆಹನಾ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಫಲಾನುಭವಿಯಾಗಿರುವುದರಿಂದ ನಾನು ಬಿಜೆಪಿಗೆ ಮತ ಹಾಕಿದ್ದೇನೆ ಎಂದು ಮಹಿಳೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com