ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಫೋಟೋ ತಿರುಚಿದ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಿರುಚಿದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಲ್ಲಿಯಾ ಜಿಲ್ಲೆಯ ಸ್ಥಳೀಯ ನಾಯಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಬಲ್ಲಿಯಾ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಿರುಚಿದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಲ್ಲಿಯಾ ಜಿಲ್ಲೆಯ ಸ್ಥಳೀಯ ನಾಯಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ತಾನು ಭಾರತೀಯ ಜನತಾ ಪಕ್ಷಕ್ಕೆ ಸೇರಿದ ವ್ಯಕ್ತಿ ಎಂದು ಹೇಳಿಕೊಳ್ಳುವ ದೋಕಾಟಿ ಠಾಣಾ ವ್ಯಾಪ್ತಿಯ ಕರ್ನ್ ಛಪ್ರಾ ಗ್ರಾಮದ ನಿವಾಸಿ ಮನೋಜ್ ಕುಮಾರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬೈರಿಯಾ ಎಸ್‌ಎಚ್‌ಒ ಧರಮ್ ವೀರ್ ಸಿಂಗ್ ಅವರು ತಿಳಿಸಿದ್ದಾರೆ.

ಈ ಸಂಬಂಧ ಮತ್ತೊಬ್ಬ ಬಿಜೆಪಿ ಸ್ಥಳೀಯ ನಾಯಕ ಧನಂಜಯ್ ಕುಮಾರ್ ಸಿಂಗ್ ಅವರು ದೂರು ದಾಖಲಿಸಿದ್ದಾರೆ.

ಸಿಎಂ ಆದಿತ್ಯನಾಥ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರಿಂದ ಕಡತ ಸ್ವೀಕರಿಸುತ್ತಿರುವ ಫೋಟೋ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಮನೋಜ್ ಕುಮಾರ್ ಸಿಂಗ್ ಅವರು ಆ ಚಿತ್ರವನ್ನು ಎಡಿಟ್ ಮಾಡಿದ್ದಾರೆ. ಮುಖ್ಯಮಂತ್ರಿ ಚಿತ್ರ ತೆಗೆದುಹಾಕಿ, ಅವರ ಜಾಗದಲ್ಲಿ ತನ್ನ ಫೋಟೋ ಹಾಕಿದ್ದಾರೆ ಎಂದು ಧನಂಜಯ್ ಕುಮಾರ್ ತಿಳಿಸಿದ್ದಾರೆ.

ನಂತರ ಅವರು ನವೆಂಬರ್ 22 ರಂದು ಫೇಸ್‌ಬುಕ್‌ನಲ್ಲಿ ಮಾರ್ಫ್ ಮಾಡಿದ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಎಂದು ಧನಂಜಯ್ ಕುಮಾರ್ ಸಿಂಗ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com