ಪತ್ನಿಗೆ 18 ವರ್ಷ, ಅದಕ್ಕಿಂತ ಹೆಚ್ಚಿದ್ದರೆ ವೈವಾಹಿಕ ಅತ್ಯಾಚಾರ 'ಅಪರಾಧವಲ್ಲ': ಅಲಹಾಬಾದ್ ಹೈಕೋರ್ಟ್‌ ಮಹತ್ವದ ತೀರ್ಪು

ಪತ್ನಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದ್ದರೆ ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತನ್ನ ಮಹತ್ವದ ತೀರ್ಪಿನಲ್ಲಿ ತೀರ್ಪು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಲಖನೌ: ಪತ್ನಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದ್ದರೆ ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತನ್ನ ಮಹತ್ವದ ತೀರ್ಪಿನಲ್ಲಿ ತೀರ್ಪು ನೀಡಿದೆ.

ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಕೋರ್ಟ್ ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ. ಐಪಿಸಿಯ ಸೆಕ್ಷನ್ 377ರ ಅಡಿಯಲ್ಲಿ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ಪ್ರತಿಪಾದಿಸಿದ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರ ಪೀಠವು ದೇಶದಲ್ಲಿ ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಹೇಳಿದ್ದಾರೆ.

ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಘೋಷಿಸುವ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಬಾಕಿ ಉಳಿದಿರುವುದರಿಂದ ಮತ್ತು ಸುಪ್ರೀಂ ಕೋರ್ಟ್ ಪ್ರಕರಣವನ್ನು ನಿರ್ಧರಿಸುವವರೆಗೆ, ಪತ್ನಿಗೆ 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದರೆ ವೈವಾಹಿಕ ಅತ್ಯಾಚಾರಕ್ಕೆ ಯಾವುದೇ ಕ್ರಿಮಿನಲ್ ಶಿಕ್ಷೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಮಧ್ಯಪ್ರದೇಶ ಹೈಕೋರ್ಟ್‌ನ ಹಿಂದಿನ ಅಭಿಪ್ರಾಯವನ್ನು ಬೆಂಬಲಿಸಿದ ಅಲಹಾಬಾದ್ ಹೈಕೋರ್ಟ್, ವೈವಾಹಿಕ ಸಂಬಂಧದಲ್ಲಿ ಯಾವುದೇ 'ಅಸ್ವಾಭಾವಿಕ ಅಪರಾಧ' (ಐಪಿಸಿಯ ಸೆಕ್ಷನ್ 377 ರ ಪ್ರಕಾರ) ಗೆ ಅವಕಾಶವಿಲ್ಲ ಎಂದು ಹೇಳಿದೆ.

ಅರ್ಜಿಯಲ್ಲಿ ದೂರುದಾರರು ತಮ್ಮ ವಿವಾಹವು ಅನೈತಿಕ ಸಂಬಂಧವಾಗಿತ್ತು. ಪತಿ ತನ್ನನ್ನು ಮೌಖಿಕ ಮತ್ತು ದೈಹಿಕ ನಿಂದನೆ ಮತ್ತು ಬಲವಂತಕ್ಕೆ ಒಳಪಡಿಸಿದ್ದಾನೆ. ಅಲ್ಲದೇ ಗುದ ಸಂಭೋಗದಂಥ ಅಸ್ವಾಭಾವಿಕ ಕ್ರಿಯೆಗೆ ಒತ್ತಾಯಿಸುವ ಮೂಲಕ ಲೌಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದರು. ಪತಿ ಅಥವಾ ಪತಿಯ ಸಂಬಂಧಿಕರಿಂದ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ (498-A) ಮತ್ತು ಸ್ವಯಂಪ್ರೇರಣೆಯಿಂದ ನೋವುಂಟುಮಾಡುವ (IPC 323) ಆರೋಪಕ್ಕಾಗಿ ಪತಿಯನ್ನು ದೋಷಿ ಎಂದು ಸ್ಥಳೀಯ ನ್ಯಾಯಾಲಯವು, ಸೆಕ್ಷನ್ 377ರ ಅಡಿಯಲ್ಲಿ ದಾಖಲಾದ ಆರೋಪದಿಂದ ಅವರನ್ನು ಖುಲಾಸೆಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com