ಬರೇಲಿ(ಉತ್ತರ ಪ್ರದೇಶ): ಡಂಪರ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು 8 ಮಂದಿ ಸಜೀವ ದಹನಗೊಂಡಿರುವ ದುರ್ಘಟನೆ ನಿನ್ನೆ ಶನಿವಾರ ರಾತ್ರಿ ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಡಂಪರ್ ನ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಹೊತ್ತಿ ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಡಿಕ್ಕಿಯ ನಂತರ ದೊಡ್ಡ ಸ್ಫೋಟದ ಶಬ್ಧ ಕೇಳಿಬಂದು ಎರಡೂ ವಾಹನಗಳು ಹೊತ್ತಿ ಉರಿಯಿತು, ಪಕ್ಕದ ನಿವಾಸಿಗಳು ಕೂಡಲೇ ಸ್ಥಳಕ್ಕೆ ಹೋಗಿ ಪರಿಸ್ಥಿತಿ ನೋಡಿ ಪೊಲೀಸರಿಗೆ ಸುದ್ದಿ ತಲುಪಿಸಿದರು ಎನ್ನುತ್ತಾರೆ.
ಪೊಲೀಸ್ ತಂಡ ಮತ್ತು ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕೆ ಧಾವಿಸಿ ಹೊತ್ತಿ ಉರಿಯುತ್ತಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಿದರು. ಆದರೆ ಕಾರಿನೊಳಗೆ ಸಿಲುಕಿಹಾಕಿಕೊಂಡವರನ್ನು ಹೊರಗೆ ತರಲು ಸಾಧ್ಯವಾಗದೇ ಸ್ಥಳದಲ್ಲಿಯೇ ಸಜೀವ ದಹನಗೊಂಡರು.
ಡಂಪರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದ ಎಂಟು ಮಂದಿ ಸಜೀವ ದಹನವಾಗಿದ್ದಾರೆ ಎಂದು ಸ್ಥಳೀಯ ಎಸ್ ಎಸ್ ಪಿ ತಿಳಿಸಿದ್ದಾರೆ. ಕಾರು ಬರೇಲಿಯಿಂದ ಬಹೇರಿಗೆ ಸಂಚರಿಸುತ್ತಿತ್ತು.
ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಮೃತಪಟ್ಟ 8 ಮಂದಿಯಲ್ಲಿ ಒಂದು ಮಗು ಕೂಡ ಸೇರಿದೆ. ಹೆಚ್ಚಿನ ವಿವರ ಸಿಗಬೇಕಿದೆ.
Advertisement