ರಾಜಸ್ಥಾನ: ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಮುಂದಿನ ಸಿಎಂ ಘೋಷಣೆ!

ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ  ಬಿಜೆಪಿ ಶಾಸಕರು ಮಂಗಳವಾರ ಜೈಪುರದಲ್ಲಿ ಸಭೆ ಸೇರಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜೈಪುರ: ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ  ಬಿಜೆಪಿ ಶಾಸಕರು ಮಂಗಳವಾರ ಜೈಪುರದಲ್ಲಿ ಸಭೆ ಸೇರಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ ಶಾಸಕರ ನೋಂದಣಿ ಕಾರ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಹೊಸದಾಗಿ ಆಯ್ಕೆಯಾದ ಎಲ್ಲ ಶಾಸಕರು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಭಜನಲಾಲ್ ಶರ್ಮಾ ತಿಳಿಸಿದ್ದಾರೆ.

ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಸರೋಜ್ ಪಾಂಡೆ ಮತ್ತು  ವಿನೋದ್ ತಾವ್ಡೆ ಸಭೆಯಲ್ಲಿ ಉಪಸ್ಥಿತರಿರುವರು ಎಂದು ರಾಜಸ್ಥಾನದ ಬಿಜೆಪಿ ನಾಯಕ ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ದಲಿತ ನಾಯಕರೊಬ್ಬರನ್ನು ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ,ನಾಳೆ ಎಲ್ಲವೂ ಬಹಿರಂಗವಾಗಲಿದೆ ಎಂದು ಸಿಂಗ್ ಹೇಳಿದರು.

ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಮೂರು ರಾಜ್ಯಗಳ ಪೈಕಿ ಒಂದಾದ ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಅವರು ಸಿಎಂ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಲಾಗಿದೆ.

ನವೆಂಬರ್ 25 ರ ಚುನಾವಣೆಯ ಫಲಿತಾಂಶ ಬಂದ ಒಂಬತ್ತು ದಿನಗಳ ನಂತರ ಬಿಜೆಪಿಯ ಕೇಂದ್ರ ನಾಯಕತ್ವವು ಶಾಸಕಾಂಗ ಪಕ್ಷದ ಸಭೆಯ ಬಗ್ಗೆ ಸೋಮವಾರ ಶಾಸಕರಿಗೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com