ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆ: ಸಿ.ಎಂ ಇಬ್ರಾಹಿಂ ಹೇಳಿಕೆ

ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.
ಸಿ.ಕೆ ನಾನು
ಸಿ.ಕೆ ನಾನು

ಬೆಂಗಳೂರು: ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಇಬ್ರಾಹಿಂ, ‘ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್‌, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್‌ ಸಖ್ಯ ಬೆಳೆಸುವುದು ಸರಿಯೇ’ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದ್ದಾರೆ.

ನಾನು ಕಳೆದ ಅನೇಕ ವರ್ಷಗಳಿಂದ ಜನತಾದಳದಲ್ಲಿ ಇದ್ದೇನೆ. ಹಿಂದಿನ ಸಭೆಗಳಲ್ಲಿ ಪಕ್ಷದ ವರಿಷ್ಠ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರೇ ಜೆಡಿಎಸ್‌ ಸದ್ಯ ಸಖ್ಯ ಬೆಳೆಸಿರುವ ಕ್ರಮ ಸರಿಯೇ ಎಂಬುದಕ್ಕೆ ಉತ್ತರಿಸಬೇಕು ಎಂದಿದ್ದಾರೆ.

ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಎಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದು ಇಬ್ರಾಹಿಂ ಗುಡುಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com