ಆರ್ಟಿಕಲ್ 370 'ಸುಪ್ರೀಂ' ತೀರ್ಪು ನಿರಾಶೆ ತಂದಿದೆ; ಹತಾಶೆಗೊಂಡಿಲ್ಲ, ಹೋರಾಟ ಮುಂದುವರಿಸುತ್ತೇವೆ: ಒಮರ್ ಅಬ್ದುಲ್ಲಾ, ಸಜಾದ್ ಲೋನ್

ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದಾಗ ಟೀಕಿಸಿದವರಲ್ಲಿ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಪ್ರಮುಖರು.
ಒಮರ್ ಅಬ್ದುಲ್ಲಾ, ಸಜಾದ್ ಲೋನ್
ಒಮರ್ ಅಬ್ದುಲ್ಲಾ, ಸಜಾದ್ ಲೋನ್

ಶ್ರೀನಗರ: ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದಾಗ ಟೀಕಿಸಿದವರಲ್ಲಿ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಪ್ರಮುಖರು.

ಕೇಂದ್ರ ಸರ್ಕಾರ ನಿರ್ಧಾರ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹಲವು ಸುತ್ತಿನ ವಾದ-ವಿವಾದಗಳನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನಿಂದ ನಾನು ನಿರಾಶೆಗೊಂಡಿದ್ದೇನೆ ಆದರೆ ಹತಾಶೆಗೊಂಡಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ (NC) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ. 

"ಸುಪ್ರೀಂ ಕೋರ್ಟ್ ತೀರ್ಪಿನಿಂದ ನಿರಾಶೆಗೊಂಡಿದೆ ಆದರೆ ಹತಾಶೆಗೊಂಡಿಲ್ಲ. ಹೋರಾಟ ಮುಂದುವರಿಯುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ. 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸಲು ಭಾರತೀಯ ಜನತಾ ಪಕ್ಷ (BJP) ದಶಕಗಳನ್ನು ತೆಗೆದುಕೊಂಡಿತು,ನಾವು ಹೋರಾಟ ಮುಂದುವರಿಸುತ್ತೇವೆ ಎಂದರು. 

"ಬಿಜೆಪಿಗೆ ಇಲ್ಲಿಗೆ ತಲುಪಲು ದಶಕಗಳೇ ಬೇಕಾಯಿತು. ನಾವು ಕೂಡ ದೀರ್ಘಾವಧಿ ಹೋರಾಟಕ್ಕೆ ಸಿದ್ಧರಾಗಿದ್ದೇವೆ" ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ತೀರ್ಪು ನಿರಾಶಾದಾಯಕವಾಗಿದೆ, ಜಮ್ಮು ಮತ್ತು ಕಾಶ್ಮೀರದ ಜನರಿಗೆ ನ್ಯಾಯವು ಮತ್ತೊಮ್ಮೆ "ಕೈತಪ್ಪಿ ಹೋಗಿದೆ" ಎಂದು ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಮುಖ್ಯಸ್ಥ ಸಜಾದ್ ಲೋನ್ ಪ್ರತಿಕ್ರಿಯಿಸಿದ್ದಾರೆ. 

"ಆರ್ಟಿಕಲ್ 370 ರ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ನಿರಾಶಾದಾಯಕವಾಗಿದೆ. ನ್ಯಾಯವು ಮತ್ತೊಮ್ಮೆ ಜಮ್ಮು-ಕಾಶ್ಮೀರ ಜನರ ಕೈತಪ್ಪಿ ಹೋಗಿದೆ ಎಂದಿದ್ದಾರೆ. 

370 ನೇ ವಿಧಿಯನ್ನು ಕಾನೂನುಬದ್ಧವಾಗಿ ಅಳಿಸಿಹಾಕಿರಬಹುದು, ಆದರೆ ಯಾವಾಗಲೂ ನಮ್ಮ ರಾಜಕೀಯ ಆಕಾಂಕ್ಷೆಗಳ ಅಲ್ಲಿನ ಭಾಗವಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ ಮತ್ತು 2024ರ ಸೆಪ್ಟೆಂಬರ್ 30ರೊಳಗೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರವೇ ಮರುಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com