ಸಿಯಾಚಿನ್‌ನಲ್ಲಿ ಕಾರ್ಯಾಚರಣೆ ಹುದ್ದೆಗೆ ನಿಯೋಜನೆ: ಹೊಸ ಇತಿಹಾಸ ಸೃಷ್ಟಿಸಿದ ಕ್ಯಾಪ್ಟನ್ ಫಾತಿಮಾ ವಾಸಿಂ!

ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಕಾರ್ಯಾಚರಣೆ ಹುದ್ದೆಗೆ ನಿಯೋಜಿಸಲಾದ ಭಾರತೀಯ ಸೇನೆಯ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿದ್ದಾರೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಕ್ಯಾಪ್ಟನ್ ಫಾತಿಮಾ ವಾಸಿಂ
ಕ್ಯಾಪ್ಟನ್ ಫಾತಿಮಾ ವಾಸಿಂ

ನವದೆಹಲಿ: ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಕಾರ್ಯಾಚರಣೆ ಹುದ್ದೆಗೆ ನಿಯೋಜಿಸಲಾದ ಭಾರತೀಯ ಸೇನೆಯ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿದ್ದಾರೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಿಯೋಜಿಸಲಾದ ಎರಡನೇ ವೈದ್ಯಕೀಯ ಅಧಿಕಾರಿಯಾಗಿದ್ದಾರೆ ಎಂದು ಭಾರತೀಯ ಸೇನೆಯ  ಫೈರ್ ಮತ್ತು ಫ್ಯೂರಿ ಕಾರ್ಪ್ಸ್ ಮಂಗಳವಾರ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂಬಂಧಿಸಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದು,  ಸೇನೆಯೊಳಗೆ ಮಹಿಳೆಯರ ಸೇರ್ಪಡೆ ಉತ್ತೇಜಿಸುವಲ್ಲಿ ಕ್ಯಾಪ್ಟನ್ ಫಾತಿಮಾ ಅವರ ನಿಯೋಜನೆಯ ಮಹತ್ವವನ್ನು ಎತ್ತಿ ತೋರಿಸಿದೆ.

"ಸಿಯಾಚಿನ್ ವಾರಿಯರ್ಸ್‌ನ ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ಸಿಯಾಚಿನ್ ಗ್ಲೇಸಿಯರ್  ನಲ್ಲಿನ ಕಾರ್ಯಾಚರಣಾ ಹುದ್ದೆಗೆ ನೇಮಕಗೊಂಡ ಮೊದಲ  ಮಹಿಳಾ ವೈದ್ಯಕೀಯ ಅಧಿಕಾರಿಯಾಗಿದ್ದಾರೆ. ಸಿಯಾಚಿನ್ ಬ್ಯಾಟಲ್ ಸ್ಕೂಲ್‌ನಲ್ಲಿ ಕಠಿಣ ತರಬೇತಿ ಪಡೆದ ನಂತರ ಆಕೆಯನ್ನು 15,200 ಅಡಿ ಎತ್ತರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದು ಆಕೆಯ ಅದಮ್ಯ ಮನೋಭಾವ ಮತ್ತು ಹೆಚ್ಚಿನ ಪ್ರೇರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಹೇಳಿದೆ.

ಈ ತಿಂಗಳ ಆರಂಭದಲ್ಲಿ, ಕ್ಯಾಪ್ಟನ್ ಗೀತಿಕಾ ಕೌಲ್ ಅವರು ಸಿಯಾಚಿನ್‌ನಲ್ಲಿ ನಿಯೋಜಿಸಲಾದ ಭಾರತೀಯ ಸೇನೆಯ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿದ್ದಾರೆ. ಉತ್ತರ ಹಿಮಾಲಯದಲ್ಲಿರುವ ಸಿಯಾಚಿನ್ ತನ್ನ ಆಯಕಟ್ಟಿನ ಪ್ರಾಮುಖ್ಯತೆ, ಕಠಿಣ ಹವಾಮಾನ ಮತ್ತು ಬೇಡಿಕೆಯ ಭೂಪ್ರದೇಶದಿಂದಾಗಿ ಸವಾಲುಗಳನ್ನು ಒಡ್ಡುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com