ಪುದುಚೇರಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮಹಿಳಾ ಮೀಸಲಾತಿ ವಿಸ್ತರಿಸುವ 2 ಮಸೂದೆಗೆ ಲೋಕಸಭೆ ಅಂಗೀಕಾರ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ(106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ(106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆಗಳಿಗೆ ವಿಸ್ತರಿಸುವ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ(ಎರಡನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ(ತಿದ್ದುಪಡಿ) ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಈ ಎರಡು ಮಸೂದೆಗಳು ಸಾರ್ವಜನಿಕ ಪ್ರತಿನಿಧಿಗಳಾಗಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಮತ್ತು ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು.

ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ರೈ, "ಅದು ಮೊಘಲರ ಆಳ್ವಿಕೆ, ಆಕ್ರಮಣಕಾರರ ಆಳ್ವಿಕೆ, ಬ್ರಿಟಿಷರ ಆಳ್ವಿಕೆ ಅಥವಾ ಕಾಂಗ್ರೆಸ್ ಸರ್ಕಾರಗಳು" ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದ್ದವು. ಅವರು ಮಹಿಳೆಯರು ಬೆಳೆಯಲು ಸೂಕ್ತ ಅವಕಾಶ ನೀಡಲಿಲ್ಲ ಮತ್ತು ಅವರಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದರು.

ಆರ್ಟಿಕಲ್ 370 ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧವಾ ಪಿಂಚಣಿಯು ಶೇ. 100 ರಷ್ಟು ಫಲಾನುಭವಿಗಳಿಗೆ ತಲುಪಿದೆ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರತಿಯೊಂದು ಜಿಲ್ಲೆಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ ಒನ್-ಸ್ಟಾಪ್ ಸೆಂಟರ್ ಸ್ಕೀಮ್ ಬಂದಿವೆ ಎಂದು ರೈ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com