ಅಲಹಾಬಾದ್​ ವಿವಿ ಹಾಸ್ಟೆಲ್​ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ವಿದ್ಯಾರ್ಥಿಗೆ ಗಾಯ

ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲಹಾಬಾದ್ ವಿವಿ
ಅಲಹಾಬಾದ್ ವಿವಿ

ಪ್ರಯಾಗರಾಜ್: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಈ ಘಟನೆ ನಡೆದಿದೆ. ಎಂ.ಎ ವಿದ್ಯಾರ್ಥಿಯಾಗಿರುವ ಪ್ರಭಾತ್‌ ಯಾದವ್ ಎಂಬುವವರು ತಮ್ಮ ಕೋಣೆಯಲ್ಲಿ ಏಕೆ ಬಾಂಬ್‌ ತಯಾರಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಹೇಳಿದ್ದಾರೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಎಸ್‌ಆರ್‌ಎನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ. ಪ್ರಭಾತ್‌ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ರಾಜೇಶ್ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com