
ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಸಲಿದ್ದು, ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾಗವಹಿಸಲಿದ್ದಾರೆ.
ಜೈಪುರದ ಐತಿಹಾಸಿಕ ಆಲ್ಬರ್ಟ್ ಹಾಲ್‌ನಲ್ಲಿ ಭಾರಿ ಭದ್ರತೆ ಮತ್ತು ಆಸನ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಾರಂಭವನ್ನು ವೀಕ್ಷಿಸುವ ಸಾಧ್ಯತೆಯಿದೆ.
ಈ ಸಮಾರಂಭಕ್ಕೆ ಕೇಂದ್ರ ನಾಯಕರು ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ರಾಜ್ಯ ರಾಜಧಾನಿಗೆ ಹೋಗುವ ಪ್ರಮುಖ ರಸ್ತೆಗಳನ್ನು ಕೇಂದ್ರದ ವಿವಿಧ ಕಲ್ಯಾಣ ಯೋಜನೆಗಳ ಪೋಸ್ಟರ್ ಮತ್ತು ಬ್ಯಾನರ್‌ಗಳು ಹಾಗೂ ನಾಯಕರ ಕಟೌಟ್‌ಗಳಿಂದ ಅಲಂಕರಿಸಲಾಗಿದೆ ಎಂದು ಅವರು ಹೇಳಿದರು.
ನಾಳೆ ರಾಜ್ಯಸ್ಥಾನ ಮುಖ್ಯಮಂತ್ರಿಯಾ ಭಜನ್‌ಲಾಲ್ ಶರ್ಮಾ ಮತ್ತು ಉಪ ಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಹಾಗೂ ಪ್ರೇಮ್ ಚಂದ್ ಬೈರ್ವಾ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಮೂವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
Advertisement