ಆಸ್ಪತ್ರೆಗೆ ದಾಖಲಾಗಿದ್ದ ತೆಲಂಗಾಣ ಮಾಜಿ ಸಿಎಂ KCR ಆಸ್ಪತ್ರೆಯಿಂದ ಬಿಡುಗಡೆ

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೆಸಿಆರ್ ಆಸ್ಪತ್ರೆಯಿಂದ ಬಿಡುಗಡೆ
ಕೆಸಿಆರ್ ಆಸ್ಪತ್ರೆಯಿಂದ ಬಿಡುಗಡೆ
Updated on

ಹೈದರಾಬಾದ್: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮನೆಯಲ್ಲೇ ಕಾಲು ಜಾರಿ ಬಿದ್ದು ಕೆಸಿಆರ್ ಆಸ್ಪತ್ರೆಗೆ ದಾಖಲಾಗಿದ್ದರು. ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಹೈದರಾಬಾದ್‌ನ ಯಶೋದಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

69 ವರ್ಷದ ಕೆಸಿಆರ್ ಅವರು ಡಿಸೆಂಬರ್ 7 ರಂದು ಎರ್ರವಳ್ಳಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಬಿದ್ದು ಸೋಮಾಜಿಗುಡದ ಯಶೋದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದೀಗ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಕುರಿತು ಮಾಹಿತಿ ನೀಡಿದ ಯಶೋದಾ ಆಸ್ಪತ್ರೆಯ ವೈದ್ಯರು ಕೆಸಿಆರ್ ಅವರಿಗೆ ನಡೆಸಿದ ಶಸ್ತ್ರಚಿಕಿತ್ಸೆ ಯಶ್ವಿಯಾಗಿದೆ. ಅಲ್ಲದೆ ಇದೀಗ ಗುಣಮುಖರಾಗುತ್ತಿದ್ದು ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಕೆಸಿಆರ್ ಆಸ್ಪತ್ರೆಯಿಂದ ನಿರ್ಗಮಿಸಿದ ವಿಡಿಯೋ ಕೂಡ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com