ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯಸ್ಮರಣೆ: ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಕೆ

ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಸರ್ದಾರ್ ಪಟೇಲ್ ಗೆ ಮೋದಿ ನಮನ(ಸಂಗ್ರಹ ಚಿತ್ರ)
ಸರ್ದಾರ್ ಪಟೇಲ್ ಗೆ ಮೋದಿ ನಮನ(ಸಂಗ್ರಹ ಚಿತ್ರ)

ಬೆಂಗಳೂರು: ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳು. ಅವರ ದೂರದೃಷ್ಟಿಯ ನಾಯಕತ್ವ, ರಾಷ್ಟ್ರದ ಏಕತೆಗಾಗಿ ಅವರ ಬದ್ಧತೆಯು ಆಧುನಿಕ ಭಾರತ ನಿರ್ಮಾಣಕ್ಕೆ ನಾಂದಿ ಹಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅವರ ಅನುಕರಣೀಯ ಕೆಲಸವು ನಮಗೆ ಶಕ್ತಿ. ನಾವು ಅವರ ಜೀವನದಿಂದ ಸ್ಫೂರ್ತಿಯನ್ನು ಪಡೆಯುವುದನ್ನು ಮುಂದುವರಿಸುತ್ತೇವೆ ಮತ್ತು ಅವರ ಸಮೃದ್ಧ ಭಾರತದ ಕನಸನ್ನು ನನಸಾಗಿಸಲು ಕೆಲಸ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಏಕತೆಯ ಶಿಲ್ಪಿ, ನವಭಾರತದ ಉಕ್ಕಿನ ಮನುಷ್ಯ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಪುಣ್ಯತಿಥಿಯಂದು ಗೌರವ ನಮನಗಳು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com