ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಪ್ರಮಾಣ ವಚನ ಸ್ವೀಕಾರ

ತಮ್ಮ ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಭಜನ್ ಲಾಲ್ ಪ್ರಮಾಣ ವಚನ ಸ್ವೀಕಾರ
ಭಜನ್ ಲಾಲ್ ಪ್ರಮಾಣ ವಚನ ಸ್ವೀಕಾರ

ಜೈಪುರ: ತಮ್ಮ ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್‌ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು. ಭಜನ್ ಲಾಲ್ ಹೊರತಾಗಿ ಬಿಜೆಪಿ ರಾಜಸ್ಥಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಹೆಣೆದಿತ್ತು.

ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಮೂವರೂ ಶುಕ್ರವಾರ ಅಂದರೆ ಡಿಸೆಂಬರ್ 15 ರಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ಭಜನ್‌ ಲಾಲ್‌ ಅವರು ನಿವಾಸಕ್ಕೆ ತೆರಳಿ ತಂದೆ- ತಾಯಿಗಳ ಆಶೀರ್ವಾದ ಪಡೆದರು. ಜತೆಗೆ ಜೈಪುರದ ದೇವಸ್ಥಾನವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್​ ಸಿಂಗ್, ಏಕನಾಥ್ ಶಿಂಧೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜಸ್ಥಾನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಅನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಕೇವಲ 69 ಸ್ಥಾನಗಳು ಲಭಿಸಿವೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮವಾಗಿ ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com