ಮಥುರಾ ಮಸೀದಿ ಸಮೀಕ್ಷೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮೂವರು ವಕೀಲರ ತಂಡದಿಂದ ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಅನುಮತಿಸಿ ಅಲಹಾಬಾದ್ ಹೈಕೋರ್ಟ್‌ ಡಿಸೆಂಬರ್ 14 ರಂದು ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮಥುರಾ ಮಸೀದಿ
ಮಥುರಾ ಮಸೀದಿ

ನವದೆಹಲಿ: ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮೂವರು ವಕೀಲರ ತಂಡದಿಂದ ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಅನುಮತಿಸಿ ಅಲಹಾಬಾದ್ ಹೈಕೋರ್ಟ್‌ ಡಿಸೆಂಬರ್ 14 ರಂದು ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ವಿಚಾರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಜನವರಿ 9 ರಂದು ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಹೈಕೋರ್ಟ್ ಆದೇಶ ಮುಂದುವರಿಯುತ್ತದೆ ಮತ್ತು ಹೈಕೋರ್ಟ್ ಈ ವಿಷಯವನ್ನು ಮುಂದುವರಿಸಲಿದೆ. ಸುಪ್ರೀಂ ಕೋರ್ಟ್‌ನಿಂದ ಯಾವುದೇ ತಡೆ ಇಲ್ಲ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಈ ಹಿಂದೆ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ  ನಂತರ ವಿಚಾರಣೆ ನಡೆಯುತ್ತಿರುವ ಶ್ರೀ ಕೃಷ್ಣ ಜನ್ಮಭೂಮಿ ಕೇಸಿನಲ್ಲಿ ಅಲಹಾಬಾದ್ ಹೈಕೋರ್ಟ್ ಪ್ರಮುಖವಾದ ತೀರ್ಪು ನೀಡಿದೆ. ವಾರಣಾಸಿಯ ಜ್ಞಾನವಾಪಿ ದೇವಸ್ಥಾನದಲ್ಲಿ ಯಾವ ರೀತಿಯಲ್ಲಿ ಸಮೀಕ್ಷೆ ನಡೆಸಲಾಗಿದೆಯೋ ಅದೇ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುವುದು. ಗುರುವಾರ ನ್ಯಾಯಾಲಯವು ವಕೀಲರ ನಿಯೋಗವನ್ನು ನೇಮಿಸಿ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ವಕೀಲರ ಕಮೀಷನ್ ಸಮೀಕ್ಷೆ ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುತ್ತದೆ.

ಅಲಹಾಬಾದ್ ಹೈಕೋರ್ಟ್ ಮಥುರಾದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ಅನುಮೋದಿಸಿದ ನಂತರ, ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಈ ನಿರ್ಧಾರವನ್ನು ಮಹತ್ವದ ತೀರ್ಪು ಎಂದು ಕರೆದರು. ಡಿಸೆಂಬರ್ 18 ರಂದು ಸಮೀಕ್ಷೆಯ ವಿಧಾನಗಳನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com